ಬಾಗೇಪಲ್ಲಿ: ಬಾಗೇಪಲ್ಲಿ ಪಟ್ಟಣದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನ, ಅಧ್ಯಯನ ಕೇಂದ್ರ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಾಗಾರಗಳ ಸಭಾಂಗಣ ಕಾಮಗಾರಿಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಹೈಟೆಕ್ ಮಾದರಿಯ ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ₹15 ಕೋಟಿ ವೆಚ್ಚವಾಗಲಿದೆ.

ಇದರೊಂದಿಗೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಒತ್ತಾಯಿಸಿ 40 ವರ್ಷಗಳ ದಲಿತ, ಪ್ರಗತಿಪರ, ರೈತರು ಮತ್ತು ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ತಾಲ್ಲೂಕು ಕಚೇರಿ ಅಥವಾ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದ ಪೈಕಿ ಎಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು ಎಂಬ ಗೊಂದಲ ಉಂಟಾಗಿತ್ತು. ಪಟ್ಟಣದ ಹೊರಗೆ ಭವನ ಬೇಡ. ತಾಲ್ಲೂಕು ಪಂಚಾಯಿತಿ ಆವರಣದಲ್ಲಿಯೇ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು ಎಂದು ಪ್ರತಿಪರ, ದಲಿತ ಪರ ಸಂಘಟನೆಗಳು ಡಾ.ಎಚ್.ಎನ್. ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಒತ್ತಾಯಿಸಿದ್ದವು. ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದ ಜಾಗದಲ್ಲೇ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಹ ಸಂಚಾಲಕ ಬಿ.ವಿ. ವೆಂಕಟರವಣ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-16-729277180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.