ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ, ಗುಡಿಬಂಡೆಗೆ ಹೆಚ್ಚಿನ ಅನುದಾನಕ್ಕೆ ಮನವಿ

Last Updated 8 ಫೆಬ್ರುವರಿ 2021, 5:03 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಬಾಗೇಪಲ್ಲಿ ಹಾಗೂ ಗುಡಿಬಂಡೆ ಅತಿ ಹಿಂದುಳಿದ ತಾಲ್ಲೂಕುಗಳು ಆಗಿರುವುದರಿಂದ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಿ, ಅಭಿವೃದ್ಧಿಪಡಿಸಬೇಕು’ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮನವಿ ಮಾಡಿದರು.

ಪಟ್ಟಣದ ಗಾನ ಕಲ್ಯಾಣ ಮಂಟಪದಲ್ಲಿ ಭಾನುವಾರ ಬಾಗೇಪಲ್ಲಿ, ಗುಡಿಬಂಡೆ ತಾಲ್ಲೂಕುಗಳ ಗಾಣಿಗ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕುಗಳು ಮೊದಲಿಂದಲೂ ಸಾಕಷ್ಟು ಅಭಿವೃದ್ಧಿ ಆಗುತ್ತಿಲ್ಲ. ಡಾ.ಡಿ.ಎಂ. ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದೆ. ಸರ್ಕಾರಗಳು ಶಾಶ್ವತ ನೀರಾವರಿ, ಕೈಗಾರಿಕಾ ಪ್ರದೇಶಗಳನ್ನು ಆರಂಭಿಸಬೇಕು. ಗಾಣಿಗ ಸಮಾಜದವರು ಕಡಿಮೆ ಇದ್ದರೂ, ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದಾರೆ. ಸರ್ಕಾರಗಳ ಯೋಜನೆಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉತ್ತಮವಾಗಿ ವ್ಯಾಸಂಗ ಮಾಡಿ, ಉತ್ತಮ ಸತ್ಪ್ರಜೆಗಳಾಗಬೇಕು’ ಎಂದು ಕರೆ ನೀಡಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ‘ಸಮಾಜದ ಸಂಘಟನೆ ಮಾಡುವುದರ ಜತೆಗೆ ಅನ್ಯ ಸಮಾಜಗಳನ್ನು ಗೌರವದಿಂದ ಕಾಣಬೇಕು. ಗಾಣಿಗ ಸಮಾಜದ ಜನ ಶೈಕಣಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕಾಣಬೇಕು. ಸಮಾಜದ ಉತ್ತಮ ಸಾಧಕರನ್ನು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು’ ಎಂದರು‌.

‘ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕತೆಯಿಂದ ಸದೃಢವಾಗಿದ್ದಾರೆ ರಾಜಕೀಯ ಮತ್ತು ಇತರೆ ಕ್ಷೇತ್ರಗಳಲ್ಲಿಯೂ ಕೂಡ ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಗಾಣಿಗ ಸಮಾಜದಲ್ಲಿ ಆರ್ಥಿಕತೆಯಿಂದ ಬಲಾಢ್ಯ ಇದ್ದವರು ಇಂತಹ ಕಾರ್ಯಕ್ರಮಗಳಿಗೆ ಪ್ರಾಯೋಜಕರಾದರೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಬೆಂಗಳೂರು ಗಾಣಿಗ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ನಾಗರಾಜಶೆಟ್ಟಿ, ಕೋಲಾರ ಚಿಕ್ಕಬಳ್ಳಾಪುರ ಜ್ಯೋತಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ರಾಧಾಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಿನರಸಿಂಹಪ್ಪ, ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ಗಾಣಿಗ ಸಂಘದ ಅಧ್ಯಕ್ಷ ಜಿ. ಎಂ.ರಾಮಕೃಷ್ಣಪ್ಪ, ಬಾಗೇಪಲ್ಲಿ ತಾಲ್ಲೂಕು ಗಾಣಿಗ ಸಮುದಾಯದ ಅಧ್ಯಕ್ಷರು, ಎಂ.ಕೃಷ್ಣಪ್ಪ, ಉಪಾಧ್ಯಕ್ಷ ಶಂಕರಪ್ಪ, ಸುಕುಮಾರ್ , ಉಪನ್ಯಾಸ ನಾಗರಾಜು, ಶಿಕ್ಷಕರಾದ ಮನೋಹರ್, ಕೃಷ್ಣಪ್ಪ, ಶ್ರೀರಾಮಪ್ಪ, ರಂಗಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT