ಬಾಗೇಪಲ್ಲಿ: ತಾಲ್ಲೂಕಿನ ಲಘುಮದ್ದೇಪಲ್ಲಿ ಗ್ರಾಮದ ಕೆರೆಕಟ್ಟೆ ಮೇಲೆ ದ್ವಿಚಕ್ರ ವಾಹನಕ್ಕೆ ಆಟೊ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿದ್ದ ಹಿಂಬದಿ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಯಲಗಲಪಲ್ಲಿ ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿ ಕೆ.ಎಸ್. ವನಜಾ (52) ಮೃತಪಟ್ಟವರು.

ವನಜಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತಾಲ್ಲೂಕಿನ ದೇವರಾಜಪಲ್ಲಿ ಗ್ರಾಮದ ದೇವಾಲಯಕ್ಕೆ ತೆರಳುತ್ತಿದ್ದರು. ಲಘುಮದ್ದೇಪಲ್ಲಿ ಗ್ರಾಮದ ಕೆರೆಕಟ್ಟೆ ಬಳಿ ಸಂಭವಿಸಿದ ಅಪಘಾತದಲ್ಲಿ ವನಜಾ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಅವರ ಪತಿ ಅಶ್ವತ್ಥಪ್ಪ ತಿಳಿಸಿದ್ದಾರೆ.

15 ವರ್ಷಗಳಿಂದ ತಾಲ್ಲೂಕಿನ ಬೈರೇಗೊಲ್ಲಪಲ್ಲಿ ಮತ್ತು ಯಲಗಲಪಲ್ಲಿ ಗ್ರಾಮಗಳ ಅಂಗನವಾಡಿ ಕೇಂದ್ರದಲ್ಲಿ ವನಜಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರಿಗೆ ಇಬ್ಬರು ಮಕ್ಕಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪತಿ ಸ್ವಗ್ರಾಮ ದೇವರಾಜಪಲ್ಲಿ ಗ್ರಾಮದಲ್ಲಿ ಸೋಮವಾರ ಸಂಜೆ ಅಂತ್ಯ ಕ್ರಿಯೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-1136931634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.