ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ | ಖಾಸಗಿ ಬಸ್ ಪಲ್ಟಿ: ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ

Published 7 ಡಿಸೆಂಬರ್ 2023, 15:27 IST
Last Updated 7 ಡಿಸೆಂಬರ್ 2023, 15:27 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಇವರನ್ನು ಬಾಗೇಪಲ್ಲಿಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಗಾಯಾಳುಗಳ ಸಂಬಂಧಿಕರು ಆಸ್ಪತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಗಿರಲಿಲ್ಲ. ಕೂಡಲೇ ಪಾತಪಾಳ್ಯ ಪೊಲೀಸ್ ಠಾಣೆಯ ಪೊಲೀಸರು ಆಸ್ಪತ್ರೆಯ ಒಳಭಾಗದ ದ್ವಾರದಲ್ಲಿ ನಿಂತು ಸಾರ್ವಜನಿಕರನ್ನು ಒಳಪ್ರವೇಶ ಮಾಡಿಸದಂತೆ ಕ್ರಮ ತೆಗೆದುಕೊಂಡರು. ‌‌

ಮುಗಿಲುಮುಟ್ಟಿದ ಆಕ್ರಂದನ: ಆಸ್ಪತ್ರೆಯ ಮುಂದೆ ಸಂಬಂಧಿಕರು, ಕುಟುಂಬದವರು ಜಮಾಯಿಸಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರದ ಮುಂದೆ ನೂರಾರು ಜನರು ಜಮಾಯಿಸಿದ್ದರು. ಶವಾಗಾರದಲ್ಲಿ ಶವಪರೀಕ್ಷೆ ಮಾಡಲಾಯಿತು. ಅಫಘಾತದಲ್ಲಿ ಮೃತಪಟ್ಟ ನಾರೇಮದ್ದೇಪಲ್ಲಿಯ ಅಹಮ್ಮದ್ ಭಾಷಾ ಅವರ ಸಂಬಂಧಿಕರು ನೆರೆದಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಒಳವಾರ್ಡ್‍ನಲ್ಲಿ 33 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಯಿತು. 8 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.

ಚಿಂತಾಮಣಿ, ಚೇಳೂರು, ಬಿಳ್ಳೂರು, ಚಾಕವೇಲು ಕಡೆಗಳಿಗೆ ಸಾರಿಗೆ ಬಸ್ ಸೌಲಭ್ಯಗಳು ಸಮರ್ಪಕವಾಗಿ ಇಲ್ಲ. ಬಹುತೇಕವಾಗಿ ಈ ಮಾರ್ಗದಲ್ಲಿ ಖಾಸಗಿ ಬಸ್ ಗಳ ಸಂಚಾರ ಅತಿ ಹೆಚ್ಚಾಗಿದೆ. ರಸ್ತೆಗಳ ಮೇಲೆ ಚಾಲನೆಗೆ ಯೋಗ್ಯವಿರದ ಹಾಗೂ ಹಳೇ ಕಾಲದ ಬಸ್ ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಅವಕಾಶ ಮಾಡಲಾಗಿದೆ. ಚಾಲಕ ಅತಿ ವೇಗದಿಂದ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಆಗಿದೆ ಎಂದು ಗಾಯಾಳುಗಳ ಕುಟುಂಬಸ್ಥರು ಅಕ್ರೋಶ ವ್ಯಕ್ತಪಡಿಸಿದರು.

ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವುದು.
ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT