ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಕ್ಕ ನಿರ್ಮಾಣವಾಗುತ್ತಿರುವ ಖಾಸಗಿ ಬಡಾವಣೆಯಿಂದ ಕಾಲೇಜಿನ ಜಾಗ ಅತಿಕ್ರಮಣದ ಬಗ್ಗೆ ಅಧಿಕಾರಿಗಳು ಕೂಡಲೇ ಸರ್ವೆ ಕಾರ್ಯ ಮಾಡಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.

ಕಾಲೇಜಿಗೆ ಇತ್ತೀಚೆಗೆ ಭೇಟಿ ನೀಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು, ಖಾಸಗಿಯವರಿಂದ ನಿರ್ಮಾಣವಾಗುತ್ತಿರುವ ಬಡಾವಣೆ ಜಾಗವನ್ನು ಪರಿಶೀಲಿಸಿದರು. ಕಾಲೇಜಿನ ಜಾಗ ಮತ್ತು ಖಾಸಗಿ ಬಡಾವಣೆ ಜಾಗಗಳನ್ನು ಅಧಿಕಾರಿಗಳು ಕೂಡಲೇ ಸರ್ವೆ ಮಾಡಬೇಕು. ಸರ್ವೆಯಲ್ಲಿ ಕಾಲೇಜಿನ ಜಾಗವನ್ನು ಖಾಸಗಿ ಬಡಾವಣೆಯವರು ಒತ್ತುವರಿ ಮಾಡಿದ್ದರೆ, ಅದನ್ನು ತೆರವುಗೊಳಿಸಬೇಕು. ಸರ್ಕಾರಿ ಜಾಗಗಳನ್ನು ಖಾಸಗಿಯವರು ಅತಿಕ್ರಮಣ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಹೇಳಿದರು.

ಈ ವೇಳೆ ತಹಶೀಲ್ದಾರ್ ಮನೀಷಾ ಎನ್. ಪತ್ರಿ, ಸರ್ಕಲ್ ಇನ್ಸ್ಪೆಕ್ಟರ್ ಅಜಯ್ಸಾರಥಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ವೈ. ನಾರಾಯಣ, ಐಕ್ಯೂಎಸಿ ಸಂಚಾಲಕ ಡಾ.ಸಿ.ಎಸ್.ವೆಂಕಟರಾಮರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಸ್.ನರೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-1667219944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.