ಬಾಗೇಪಲ್ಲಿ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತಾಲ್ಲೂಕು ಮುಖಂಡರ ಸಭೆ ನಡೆಯಿತು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಇಬ್ಬರು ಮೃತಪಟ್ಟಿರುವ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಮೃತಪಟ್ಟವರಿಗೆ ₹25 ಲಕ್ಷ ಪರಿಹಾರ ಕಲ್ಪಿಸಬೇಕು ಎಂದು ಇತ್ತೀಚೆಗೆ ಡಿವೈಎಫ್ಐ ನೇತೃತ್ವದಲ್ಲಿ ಮುಖಂಡರು ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟಿಸಿದ್ದರು. ಈ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ಕುಮಾರ್, ಡಿವೈಎಫ್ಐ ಮುಖಂಡ ಜೊತೆ ಸಭೆ ಮಾಡಿದರು.

ಸರ್ಕಾರಿ ಆಸ್ಪತ್ರೆಗೆ ಶ್ರೀಮಂತರು, ಹಣವುಳ್ಳವರು ಚಿಕಿತ್ಸೆಗೆ ಬರುವುದಿಲ್ಲ. ಬಡ, ಕೃಷಿಕೂಲಿಕಾರ್ಮಿಕರು, ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲು ವೈದ್ಯರ ಕೊರತೆ ಇದೆ. ಹಾಲಿ ಕೆಲಸ ಮಾಡುವ ವೈದ್ಯರು ಖಾಸಗಿ ಕ್ಲಿನಿಕ್ಗಳನ್ನು ತೆರೆದು ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸುಶ್ರೂಷಕರೇ ವೈದ್ಯರು ಆಗಿದ್ದಾರೆ. ಬಡಜನರ ಆರೋಗ್ಯ ಜೊತೆ ಚೆಲ್ಲಾಟ ಆಡುತ್ತಿರುವುದರಿಂದ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುತ್ತಿಲ್ಲ ಎಂದು ಡಿವೈಎಫ್ಐ ಮುಖಂಡರು ಜಿಲ್ಲಾ ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಬಾಗೇಪಲ್ಲಿ, ಚೇಳೂರು ತಾಲ್ಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಇಲ್ಲ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಹಿರಿಯ ಅಧಿಕಾರಿಗಳು ಆಸ್ಪತ್ರೆಗಳ, ಜನರ ಆರೋಗ್ಯ ಚಿಕಿತ್ಸೆ ಬಗ್ಗೆ ಕಾಳಜಿ ಇಲ್ಲವೇ? ಎಂದು ಡಿವೈಎಫ್ಐ ಮುಖಂಡ ರಾಜಶೇಖರ್ ಪ್ರಶ್ನಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಇದುವರೆಗೂ ಪರಿಹಾರ ನೀಡಿಲ್ಲ. ಕೂಡಲೇ ₹25 ಲಕ್ಷ ಪರಿಹಾರ ಘೋಷಿಸಬೇಕು ಎಂದು ಡಿವೈಎಫ್ಐ ಜಿಲ್ಲಾ ಸಂಚಾಲಕ ಹರೀಶ್ ಒತ್ತಾಯಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ಕುಮಾರ್ ಪ್ರತಿಕ್ರಿಯಿಸಿ, ‘ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಗಳ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾ ನೋಡಲ್ ಅಧಿಕಾರಿಗಳ ತನಿಖಾ ತಂಡ ನೇಮಕ ಮಾಡಲಾಗಿದೆ. ತನಿಖೆ ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ವೈದ್ಯರ, ಸಿಬ್ಬಂದಿ ನೇಮಕ ಮಾಡುವಂತೆ ಈಗಾಗಲೇ ಸಭೆಗಳಲ್ಲಿ ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಮುಂದಿನ ಕೌನ್ಸಿಲಿಂಗ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಿತ್ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಿನಯ್ಕುಮಾರ್, ಹಿರಿಯ ಶುಶ್ರೂಷಕಿ ಮಂಜುಳ, ಡಿವೈಎಫ್ಐ ಮುಖಂಡ ಸುರೇಶ್ಮದಕರಿ, ಎ.ಸೋಮಶೇಖರ, ಎನ್.ಗಣೇಶ್, ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಚನ್ನರಾಯಪ್ಪ, ತಾಲ್ಲೂಕು ಕಾರ್ಯದರ್ಶಿ ಡಿ.ಟಿ.ಮುನಿಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-16-1806376014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.