ಬಾಗೇಪಲ್ಲಿ: ಪಟ್ಟಣದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ- 44ರಲ್ಲಿ ನಿಯಮ ಉಲ್ಲಂಘಿಸಿ ಚಲಿಸಿದ ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ದ್ವಿಚಕ್ರ ವಾಹನ, ಕಾರು, ಆಟೊಗಳ ಚಾಲಕರಿಗೆ ಬುಧವಾರ ದಂಡ ಹಾಕಿದ ಪೊಲೀಸರು, ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

‘ಮೃತ್ಯುಕೂಪವಾದ ರಾಷ್ಟ್ರೀಯ ಹೆದ್ದಾರಿ’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯ ಜೂನ್ 3ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಗೊಂಡಿತ್ತು. ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ರಸ್ತೆ ನಿಯಮ ಉಲ್ಲಂಘಿಸಿದ ವಾಹನಗಳ ತಪಾಸಣೆ ಮಾಡಿದ್ದಾರೆ. ಚಾಲಕರ ಚಾಲನಾ ಪರವಾನಗಿ, ವಾಹನಗಳ ವಿಮಾ ಪತ್ರಗಳು ಸೇರಿದಂತೆ ವಾಹನಗಳ, ಚಾಲಕರ ದಾಖಲಾತಿ ಪತ್ರಗಳನ್ನು ಪರಿಶೀಲಿಸಿದ್ದಾರೆ. ದಾಖಲಾತಿ ಪತ್ರಗಳು ಇಲ್ಲದವರಿಗೆ ಮತ್ತು ನಿಯಮ ಉಲ್ಲಂಘಿಸಿ ಚಲಿಸಿದವರಿಗೆ, ಅತಿ ವೇಗದ ಚಾಲನೆ ಮತ್ತು ಹೆಲ್ಮೆಟ್ ರಹಿತ ದ್ವಿಚಕ್ರ ವಾಹನಗಳ ಚಾಲಕರಿಗೆ ದಂಡ ವಿಧಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-16-1798899562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.