ಬಾಗೇಪಲ್ಲಿ: ಪಟ್ಟಣದ ಡಾ.ಎಚ್.ಎನ್.ವೃತ್ತ, ನ್ಯಾಷನಲ್ ಕಾಲೇಜು ಮುಂಭಾಗದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಮತ್ತು ಕೂಲಿ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ ಮಾತನಾಡಿ, ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿನ ಡಾ.ಎಚ್.ಎನ್.ವೃತ್ತ, ನ್ಯಾಷನಲ್ ಕಾಲೇಜು, ಪುರಸಭೆ ಮುಂಭಾದಲ್ಲಿ ಪುರಸಭೆ ವತಿಯಿಂದ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ, ಡಾ.ಎಚ್.ಎನ್. ವೃತ್ತದಲ್ಲಿರುವ ಶೌಚಾಲಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ ಎಂದು ದೂರಿದರು.

ಕೆಪಿಆರ್ಎಸ್ ತಾಲ್ಲೂಕು ಕಾರ್ಯದರ್ಶಿ ಡಿ.ಟಿ.ಮುನಿಸ್ವಾಮಿ ಮಾತನಾಡಿ, ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣಕ್ಕಿಂತ ಹೆಚ್ಚು ಜನರು ಡಾ.ಎಚ್.ಎನ್.ವೃತ್ತದಲ್ಲಿ ಜಮಾಯಿಸುತ್ತಾರೆ. ಗೂಳೂರು, ಚೇಳೂರು, ಚಿಂತಾಮಣಿ ಕಡೆಗೆ ಸಂಚರಿಸುವ ಪ್ರಯಾಣಿಕರು ಹಾಗೂ ಕೂಲಿಕಾರ್ಮಿಕರು ಇರುತ್ತಾರೆ. ತುರ್ತುಪರಿಸ್ಥಿತಿಯಲ್ಲಿ ಮಹಿಳೆಯರು ಶೌಚಾಲಯಕ್ಕೆ ಹೋಗಲು ಪ್ರತ್ಯೇಕ ಕೊಠಡಿಗಳಿಲ್ಲ ಎಂದರು.

ಪ್ರತಿಭಟನೆಯಲ್ಲಿ ಕೃಷಿಕೂಲಿಕಾರ್ಮಿಕರ ಸಂಘಟನೆಯ ಕೆ.ಮುನಿಯಪ್ಪ, ಅಶ್ವಥ್ಥಪ್ಪ, ಜಿ.ಕೃಷ್ಣಪ್ಪ, ರಶೀದ್, ಅಬೂಬಕರ್, ರಹಮತುಲ್ಲಾ, ಅಥಾವುಲ್ಲಾ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-16-1487825097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.