ಬಾಗೇಪಲ್ಲಿ: ಪಟ್ಟಣದ ಡಿವಿಜಿ ಮುಖ್ಯರಸ್ತೆ ವಿಭಜಕದ ಹಾಗೂ ಅಂಗಡಿಗಳ ಮುಂದೆ ಮಲಗಿರುತ್ತಿದ್ದ ಮಧ್ಯ ವಯಸ್ಸಿನ ಮಹಿಳೆಯನ್ನು ಬುಧವಾರ ಮಹಿಳಾ ಸಾಂತ್ವನ ಕೇಂದ್ರದವ ಸಿಬ್ಬಂದಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ರಕ್ಷಣೆ ಮಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಅನ್ಸೂಬಾಯಿ, ಮಹಿಳಾ ಸ್ವಾಂತನ ಕೇಂದ್ರದ ಮುಖ್ಯಸ್ಥ ಎ.ಜಿ.ಸುಧಾಕರ್, ಸದಸ್ಯೆ ಸುಶೀಲ, ರಾಮಲಕ್ಷ್ಮಿ, ರೋಜಾ ಅವರು ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

ನಿಶಕ್ತ ಮಹಿಳೆ ತಾಲ್ಲೂಕಿನ ಸಡ್ಲವಾರಿಪಲ್ಲಿ ಗ್ರಾಮದವರಾಗಿದ್ದಾರೆ. ಮಹಿಳೆಗೆ ಮೂವರು ಪುತ್ರಿಯರು ಇದ್ದಾರೆ ಎಂದು ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥ ಎ.ಜಿ.ಸುಧಾಕರ್ ತಿಳಿಸಿದರು.

ಮಹಿಳೆಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.