ಬಾಗೇಪಲ್ಲಿ: ಸರ್ಕಾರಿ ಸೌಮ್ಯದ ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಕ್ರಮ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಏರಿಕೆ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಬೃಹತ್ ಜನಾಂದೋಲನ ರೂಪಿಸಲಾಗುವುದು ಎಂದು ಭಾರತ ಮಾರ್ಕ್ಸ್ವಾದಿ–ಲೆನಿನ್ ವಾದಿ ಪಕ್ಷ (ರೆಡ್ಫ್ಲಾಗ್) ರಾಜ್ಯ ಕಾರ್ಯದರ್ಶಿ ಬಸವಲಿಂಗಪ್ಪ ತಿಳಿಸಿದರು.

ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸರ್ವೆ ಸಂಖ್ಯೆ 37ರಲ್ಲಿ ಅರ್ಜಿ ಸಲ್ಲಿಸಿದ ನಿವೇಶನರಹಿತರಿಗೆ ನಿವೇಶನ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯದ 15 ಜಿಲ್ಲೆಗಳ ವಿದ್ಯುತ್ ವಿತರಣೆಗೆ ಅನುಮತಿ ಕೋರಿ ಟಾಟಾ ಪದವರ್ ಕಂಪನಿ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗೀಕರಣ ಮಾಡುವ ರಾಜ್ಯ ಸರ್ಕಾರದ ಹುನ್ನಾರವಿದು. ಹೀಗಾಗಿ, ಟಾಟಾ ಕಂಪನಿಯ ಅರ್ಜಿಯನ್ನು ಸರ್ಕಾರ ತಿರಸ್ಕರಿಸಬೇಕು. ಖಾಸಗೀಕರಣದಿಂದ ಉದ್ಯೋಗಗಳ ಕಡಿತ ಆಗಲಿದೆ ಎಂದು ದೂರಿದರು.

ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ವಿದ್ಯುತ್ ದರ ಹೆಚ್ಚಳವಾಗಲಿದೆ. ರೈತರ ಪಂಪ್ಸೆಟ್ ಬಳಕೆ ಮತ್ತು ಗೃಹಜ್ಯೋತಿ ಹಕ್ಕುಗಳನ್ನು ಜನರಿಂದ ಕಸಿಯಲ್ಪಡಲಿವೆ. ಹೀಗಾಗಿ, ಸರ್ಕಾರವೇ ವಿದ್ಯುತ್ ಕ್ಷೇತ್ರವನ್ನು ಮುನ್ನಡೆಸಬೇಕು ಎಂದು ಒತ್ತಾಯಿಸಿದರು.

ಜಾಗತಿಕ ತೈಲ ಕಂಪನಿಗಳ ಲಾಭಕ್ಕೆ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರಗಳನ್ನು ಏರಿಕೆ ಮಾಡಿದೆ. ಕೃಷಿ ಬಿಕ್ಕಟ್ಟಿನಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಬೆಲೆಗಳು ಏರಿಕೆಯಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಮತ್ತು ಜನ ವಿರೋಧಿ ನೀತಿಗಳಿಂದ ದುಡಿಯುವ ವರ್ಗದ ಕೃಷಿ ಕೂಲಿಕಾರ್ಮಿಕರು, ಸಾಮಾನ್ಯ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದೂರಿದರು.

ಪಟ್ಟಣದ ಸರ್ವೆ 37ರಲ್ಲಿ ನಿವೇಶನ ರಹಿತರಿಗೆ ನಿವೇಶನ ಮಂಜೂರಾತಿಗೆ ಸರ್ಕಾರದ ಮಟ್ಟದಲ್ಲಿ ಒತ್ತಾಯಿಸಲು ಪಕ್ಷದ 8 ಜನರ ನಿಯೋಗ ನೇಮಕ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ವಿ.ರಾಮಚಂದ್ರ, ತಾಲ್ಲೂಕು ಕಾರ್ಯದರ್ಶಿ ಮುನೀರ್ಖಾನ್, ರಾಮರೆಡ್ಡಿ, ಆದಿಶೇಷು, ವೆಂಕಟರವಣಪ್ಪ, ಜಿ.ವೆಂಕಟೇಶ್, ರಘುನಾಥರೆಡ್ಡಿ, ವೆಂಕಟರಾಮು, ಮಧುಸೂದನರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-1843467663

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.