ಬಾಗೇಪಲ್ಲಿ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಚಿಕಿತ್ಸೆಗಾಗಿ ಬರುವ ಜನಸಾಮಾನ್ಯರಿಗೆ ಆರೋಗ್ಯ ಚಿಕಿತ್ಸೆ ಲಭ್ಯವಾಗುತ್ತಿಲ್ಲ.

ಸಿಬ್ಬಂದಿ ಕೊರತೆಯಿಂದಾಗಿ ಕೌಂಟರ್ಗಳಲ್ಲಿ ಚೀಟಿ ಪಡೆಯಲು ರೋಗಿಗಳು ಉದ್ದದ ಸಾಲಿನಲ್ಲಿ ತಾಸುಗಟ್ಟಲೇ ಗಂಟೆ ನಿಲ್ಲುವ ಅನಿವಾರ್ಯತೆ ಎದುರಾಗಿದೆ. ಆಸ್ಪತ್ರೆ ಮುಂದೆ ಪಾರ್ಕಿಂಗ್ ಸಮಸ್ಯೆ, ರೋಗಿಗಳ ಸಂಚಾರಕ್ಕೆ ತೊಂದರೆಯಾಗಿದೆ. ಡಿ ಗ್ರೂಪ್ ನೌಕರರ ಕೊರತೆಯಿಂದಾಗಿ ಆಸ್ಪತ್ರೆಗೆ ಬರುವ ಹಿರಿಯ ನಾಗರಿಕರು ಮತ್ತು ಗಂಭೀರ ಸಮಸ್ಯೆಯುಳ್ಳ ರೋಗಿಗಳನ್ನು ಅವರ ಸಂಬಂಧಿಕರೇ ಸ್ಟ್ರೆಚರ್ನಲ್ಲಿ ಕೂರಿಸಿಕೊಂಡು ಅಥವಾ ಮಲಗಿಸಿಕೊಂಡು ಕರೆದೊಯ್ಯುವ ಪರಿಸ್ಥಿತಿ ಎದುರಾಗಿದೆ.

ತಾಲ್ಲೂಕಿನಲ್ಲಿ 3 ಹೋಬಳಿಗಳು 16 ಗ್ರಾಮ ಪಂಚಾಯಿತಿಗಳಿವೆ. ಮಿಟ್ಟೇಮರಿ, ಗೂಳೂರು, ಕಸಬಾ, ಪಾತಪಾಳ್ಯ ಹೋಬಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ಇದರಿಂದ ರೋಗಿಗಳು ತಾಲ್ಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಾಗಿ ಬರುತ್ತಾರೆ. ಇದರಿಂದಾಗಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿಮಂಜೂರಾದ 86 ಹುದ್ದೆಗಳ ಪೈಕಿ 36 ಹುದ್ದೆಗಳು ಭರ್ತಿಯಾಗಿವೆ. ಉಳಿದಂತೆ 50 ಹುದ್ದೆಗಳು ಖಾಲಿ ಇವೆ. ರೇಡಿಯಾಲಜಿ ತಜ್ಞರು, ಸಿಎಂಒ, ದ್ವಿತೀಯ ದರ್ಜೆ ಸಹಾಯಕರು-1, ಹಿರಿಯ ಶುಶ್ರೂಷಾಧಿಕಾರಿ-2, ಶುಶ್ರೂಷಾಧಿಕಾರಿ-6, ಕಿರಿಯ ವೈದ್ಯಕೀಯ ರೇಡಿಯಾಲಜಿಕಲ್ ಟೆಕ್ನಾಲಾಜಿಸ್ಟ್-2, ಕಿರಿಯ ಫಾರ್ಮಸಿ ಅಧಿಕಾರಿ-2, ವಾಹನ ಚಾಲಕರು-1 ಖಾಲಿ ಹುದ್ದೆಗಳು ಇವೆ. ಇನ್ನು ಮಂಜೂರಾದ 33 ಡಿ ಗ್ರೂಪ್ ನೌಕರರ ಪೈಕಿ ಒಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 32 ಹುದ್ದೆಗಳು ಭರ್ತಿಯಾಗಬೇಕಿದೆ ಎಂದು ಅಂಕಿಅಂಶಗಳು ತಿಳಿಸುತ್ತವೆ.

ವೈದ್ಯರು ಸಕಾಲದಲ್ಲಿ ಆರೋಗ್ಯ ಚಿಕಿತ್ಸೆ ನೀಡದೆ ಇತ್ತೀಚೆಗೆ ಇಬ್ಬರು ಮೃತಪಟ್ಟಿದ್ದಾರೆ. ಆದಾಗ್ಯೂ, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ರೋಗಿಗಳು ದೂರುತ್ತಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಬೇರೆ ಜಾಗದಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ಆರಂಭಕ್ಕೆ ಹಲವು ಬಾರಿ ಸಾರ್ವಜನಿಕರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಆರೋಗ್ಯ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ತಾಯಿ, ಮಕ್ಕಳ ಆಸ್ಪತ್ರೆ ಆರಂಭವಾಗಿಲ್ಲ. ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ.

ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು, ಶುಶ್ರೂಷಕರು ಇದ್ದು ಬರುವ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ರೋಗಿಗಳನ್ನು ಸಾಗಿಸಲು ಡಿ ಗ್ರೂಪ್ ನೌಕರರು ಇರಬೇಕು ಎಂದು ಮಹಿಳೆ ಕೃಷ್ಣವೇಣಿ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-16-1465552251

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.