ಬಾಗೇಪಲ್ಲಿ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ‘ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ‘ಪತ್ರಕರ್ತರು ಸಮಾಜದಲ್ಲಿನ ವೃತ್ತಿಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಕಡೆಗೂ ಗಮನ ನೀಡಬೇಕು. ಕುಟುಂಬಗಳ ಪೋಷಣೆಯು ಮುಖ್ಯ’ ಎಂದು ಹೇಳಿದರು.

ನಗರ ಪ್ರದೇಶಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗ್ರಾಮೀಣ ಮಕ್ಕಳು ಪೈಪೋಟಿ ನೀಡಲು ಉತ್ತಮವಾಗಿ ಅಭ್ಯಾಸ ಮಾಡಬೇಕು. ಉನ್ನತ ಹುದ್ದೆಗಳಿಗೇರಲು ಸತತ ಅಭ್ಯಾಸ ಮಾಡಬೇಕು. ಸಮುದಾಯಗಳ ಸಂಘಗಳು, ಸಂಸ್ಥೆಗಳು, ದಾನಿಗಳು ಪ್ರತಿಭಾನ್ವಿತರನ್ನು ಗುರುತಿಸಿ, ಪ್ರೋತ್ಸಾಹಿಸುತ್ತಿರುವುದು ಸಂತೋಷ ತಂದಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಂಘದ ರಾಜ್ಯ ಮಟ್ಟದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರವನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಬಾಗೇಪಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ರ್ಯಾಂಕು ಗಳಿಸಿದ್ದಾರೆ. ಪ್ರತಿ ವರ್ಷ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ವಿಮೆ ಸೌಲಭ್ಯ ಮತ್ತು ಶಾಲಾ ಕಾಲೇಜುಗಳ ಶುಲ್ಕಕ್ಕೆ ಸಂಘವು ಸಹಕರಿಸುತ್ತಿದೆ ಎಂದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಮಾತನಾಡಿ, ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಬೇಕು. ಪತ್ರಕರ್ತರ ಮಕ್ಕಳು ಸಹ ಪ್ರಗತಿ ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ರಾಜ್ಯ ಖಜಾಂಚಿ ಎಂ.ವಾಸುದೇವಹೊಳ್ಳ, ಜಿಲ್ಲಾ ಅಧ್ಯಕ್ಷ ವಿ.ರವಿಕುಮಾರ್, ಚೇಳೂರು ಆನಂದ್, ಮುಬಶೀರ್, ಬಿ.ಎಸ್.ಸುರೇಶ್, ಬಿ.ಟಿ.ಚಂದ್ರಶೇಖರರೆಡ್ಡಿ, ಸೈಯ್ಯದ್ ಸಿದ್ದೀಕ್, ರಾಮಕೃಷ್ಣ (ಹೆಗ್ಗಡೆ), ಎ.ಜಿ.ಸುಧಾಕರ್, ಬಿ.ಆರ್.ಕೃಷ್ಣ ಮತ್ತು ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-1987843151

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.