ಬಾಗೇಪಲ್ಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ತಾಲ್ಲೂಕು ಸಮಿತಿ ಮುಖಂಡರು, ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ತಳ್ಳುವ ಮೂಲಕ ಸೋಮವಾರ ಪ್ರತಿಭಟಿಸಿದರು.

ಡಾ.ಎಚ್.ಎನ್.ವೃತ್ತದಿಂದ ಹೊರಟ ಪ್ರತಿಭಟನಾಕಾರರು, ಬಸ್ ನಿಲ್ದಾಣದವರೆಗೆ ಸಾಗಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೆಲ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಇರಾನ್, ಇಸ್ರೇಲ್, ಅಮೇರಿಕಾ ನಡುವೆ ಯುದ್ಧ ನಡೆದಿದೆ. ಯುದ್ಧದ ನೆಪದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರಮೋದಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಏರಿಕೆ ಮಾಡಿ ಜನಸಾಮಾನ್ಯರಿಗೆ, ಕೃಷಿಕೂಲಿಕಾರ್ಮಿಕರಿಗೆ ತೊಂದರೆ ಮಾಡಿದ್ದಾರೆ. ಮೊದಲೇ ಸಾಮಾನ್ಯ ಜನರು ಬಳಕೆ ಮಾಡುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ, ಪಂಚ ರಾಜ್ಯಗಳ ಚುನಾವಣೆ ಮುಗಿದ ನಂತರದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಏರಿಕೆ ಮಾಡಿ, ಗಾಯದ ಮೇಲೆ ಬರೆ ಎಳೆಯುವಂತೆ ಮಾಡಿರುವುದು ಖಂಡನೀಯ ಆಗಿದೆ ಎಂದು ಹೇಳಿದರು.

ಹಕ್ಕುಗಳ ಬಗ್ಗೆ ಪ್ರಶ್ನೆ ಮಾಡಬಾರದೇ?

ದೇಶದಲ್ಲಿ ಕಾಕ್ರೋಚ್ ಜನತಾ ಪಕ್ಷದ ಪೋಸ್ಟ್ಗೆ ಕೋಟ್ಯಂತರ ಯುವಜನರು ಸ್ಪಂದನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಬಿಜೆಪಿಯ ದುರಾಡಳಿತ ಬಗ್ಗೆ ಜನರು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಕಾಕ್ರೋಚ್ ಜನತಾ ಪಕ್ಷವನ್ನು ರದ್ದು ಮಾಡಲು ಹೊರಟಿದೆ. ಅಂದರೆ ದೇಶದಲ್ಲಿ ನಡೆಯುವ ಜನವಿರೋಧಿ ನೀತಿಗಳ, ಸಮಸ್ಯೆಗಳ, ಹಕ್ಕುಗಳ ಬಗ್ಗೆ ಪ್ರಶ್ನೆ ಮಾಡಬಾರದೇ? ಎಂದು ಪ್ರಶ್ನಿಸಿದರು.

ಸಂವಿಧಾನ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೆ ಇದೆ. ಸರ್ಕಾರಗಳ ದುರಾಡಳಿತ, ಜನವಿರೋಧಿನೀತಿಗಳ ವಿರುದ್ಧ ಮಾತನಾಡಿ, ಜನರು ಆಳುವ ಸರ್ಕಾರಗಳ ವಿರುದ್ಧ ದಂಗೆ ಏಳುವ ಕಾಲ ಸನಿಹದಲ್ಲಿ ಇದೆ ಎಂದು ಎಚ್ಚರಿಕೆ ನೀಡಿದರು.

ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ ಮಾತನಾಡಿ, ‘ದೇಶದಲ್ಲಿ ಬಿಜೆಪಿ ಮತ್ತು ಆರರ್ಎಸ್ಎಸ್ ಎರಡೂ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಜನಸಾಮಾನ್ಯರು, ಕೃಷಿಕೂಲಿಕಾರ್ಮಿಕರು ಬಳಕೆ ಮಾಡುವ ಅಗತ್ಯ ವಸ್ತುಗಳನ್ನು ಮಾತ್ರ ಏರಿಕೆ ಮಾಡಲಾಗಿದೆ. ಆದರೆ ಕೋಟ್ಯಂತರ ಹಣ ದೇಶದ ಸಂಪತ್ತನ್ನು ಲೂಟಿ ಮಾಡಿ, ವಿದೇಶಗಳಲ್ಲಿ ಕಪ್ಪುಹಣ ಇಟ್ಟಿರುವ ಶ್ರೀಮಂತರ, ಕಾರ್ಪೋರೇಟ್ ಕಂಪನಿಗಳ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ. ಶ್ರೀಮಂತರ ಸಾಲ ಮನ್ನಾ ಮಾಡುವ ಕೇಂದ್ರ ಸರ್ಕಾರಕ್ಕೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲು ಆಗುವುದಿಲ್ಲವೇ?’ ಎಂದು ಪ್ರಶ್ನಿಸಿದರು.

2014ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆ ಆದರೂ, ದೇಶದಲ್ಲಿ ಪೆಟ್ರೋಲ್ ಬೆಲೆ ₹70 ದಾಟಿಲ್ಲ. ಆದರೆ ಇದೀಗ ಕಚ್ಚಾತೈಲದ ಬೆಲೆ ಕಡಿಮೆ ಇದ್ದರೂ, ಬೆಲೆ ಏರಿಕೆ ಮಾಡಲಾಗಿದೆ. ಕೂಡಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಏರಿಕೆ ದರಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸಿಪಿಎಂ ಮುಖಂಡ ದೇವಿಕುಂಟೆ ಶ್ರೀನಿವಾಸ್, ಚನ್ನರಾಯಪ್ಪ, ಡಿ.ಟಿ.ಮುನಿಸ್ವಾಮಿ, ಅಶ್ವತ್ಥಪ್ಪ, ಜಿ.ಕೃಷ್ಣಪ್ಪ, ರಾಮಾಂಜಿ, ಎ.ಸೋಮಶೇಖರ, ಹರೀಶ್, ಸುರೇಶ್ಮದಕರಿ, ಅಬೂಬ್ಕರ್, ರವಣಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-16-987795010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.