ಬಾಗೇಪಲ್ಲಿ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಸಭೆ ನಡೆಯಿತು.

ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲ್ಲೂಕುಗಳಲ್ಲಿ ಅವಧಿ ಒಳಗೆ ಮಳೆ ಆಗದಿದ್ದರೆ 35 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದು ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಗ್ರಾಮಗಳಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪಟ್ಟಣದ 1, 2 ಮತ್ತು 3ನೇ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಇದೆ ಎಂಬುದಾಗಿ ಸಾರ್ವಜನಿಕರಿಂದ ದೂರುಗಳು ಬಂದಿವೆ. ಮುಖ್ಯಾಧಿಕಾರಿಗಳು, ಎಂಜಿನಿಯರ್ಗಳು ಭೇಟಿ ನೀಡಿ, ಕೊಳವೆಬಾವಿ ಕೊರೆಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿರುವ ಕುರಿತು ದೂರುಗಳು ಬಂದಲ್ಲಿ, ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಆಯಾಯ ಗ್ರಾಮಗಳಲ್ಲಿ ವಾಸ್ತವ್ಯ ಇರಬೇಕು. ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ, ಗ್ರಾಮದಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಬೇಕು. ಮಳೆ ಬಂದರೆ ಹಳೆಯ ಕಾಂಪೌಂಡು, ಮನೆ, ಶೀಟು, ವಿದ್ಯುತ್ ಕಂಬ, ವಿದ್ಯುತ್ ತಂತಿಗಳ ಮೇಲೆ ನಿಗಾ ವಹಿಸಬೇಕು. ಜನರು ಮತ್ತು ಜಾನುವಾರುಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಎನ್ ಪತ್ರಿ, ಗುಡಿಬಂಡೆ ತಹಶೀಲ್ದಾರ್ ಸಿಗ್ಬತುಲ್ಲಾ, ಚೇಳೂರು ತಹಶೀಲ್ದಾರ್ ಶ್ವೇತಾ, ಇಒ ಜಿ.ವಿ. ರಮೇಶ್, ನಾಗಮಣಿ, ಜಿಲ್ಲಾ ಪಂಚಾಯಿತಿ ಎಇಇ ಮಹೇಶ್, ಪಂಚಾಯಿತಿಗಳ ಅಭಿವೃದ್ಧಿ ಮತ್ತು ಕಂದಾಯ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-952391714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.