ಬಾಗೇಪಲ್ಲಿ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಭಾನುವಾರ ನಡೆದ ರಸ್ತೆ ಅಫಘಾತದಲ್ಲಿ ಮೃತಪಟ್ಟ 6 ಮಂದಿ ಕೂಲಿ ಕಾರ್ಮಿಕರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ನೀಡಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಎಂ.ಪಿ. ಮುನಿವೆಂಕಟಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮೃತಪಟ್ಟವರು ಮತ್ತು ಗಾಯಾಳುಗಳು ಪಟ್ಟಣ ವ್ಯಾಪ್ತಿಯ ಕೂಲಿ ಕಾರ್ಮಿಕರಾಗಿದ್ದಾರೆ. ಪಟ್ಟಣದಲ್ಲಿ ಬಡತನ ರೇಖೆಗಿಂತ ಕಡಿಮೆ ಇರುವ 30ರಿಂದ 55 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಕೂಲಿ ಕಾರ್ಮಿಕರಿದ್ದಾರೆ. ಅವರಿಗೆ ದುಡಿಯುವ ಸಾಮರ್ಥ್ಯವಿದೆ. ಆದರೆ, ಪಟ್ಟಣ ವ್ಯಾಪ್ತಿಯಲ್ಲಿ ಕೆಲಸ ಸಿಗದ ಕಾರಣ, ಅವರು ಹೊರವಲಯದಲ್ಲಿನ ಗ್ರಾಮೀಣ ಹೊಲ, ಗದ್ದೆಗಳಲ್ಲಿ ಕಳೆ ತೆಗೆಯುವ, ಭತ್ತ ನಾಟಿ ಮಾಡುವ, ಬಿತ್ತನೆ ಕೆಲಸಕ್ಕೆ ಹೋಗುತ್ತಾರೆ. ಇಟ್ಟಿಗೆ, ಮರ ಕೆಲಸ ಮಾಡುತ್ತಾರೆ. ಆದರೆ, ಅವರ ಜೀವಕ್ಕೆ ಬೆಲೆ ಇಲ್ಲ ಎಂದರು.

ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ–44 ಅನ್ನು ಅವೈಜ್ಞಾನಿಕವಾಗಿ ಮಾಡಲಾಗಿದೆ. ಸರ್ವಿಸ್ ರಸ್ತೆಗಳು ಇಲ್ಲ. ಮುಖಾಮುಖಿ ವಾಹನಗಳ ಸಂಚಾರದಿಂದ ಅಫಘಾತಗಳು ಹೆಚ್ಚಾಗುತ್ತಿವೆ. ಕೂಡಲೇ ರಸ್ತೆ ಬದಿಗಳಲ್ಲಿ ಸರ್ವೀಸ್ ರಸ್ತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-16-1000667824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.