ಸೋಮವಾರ, ಆಗಸ್ಟ್ 19, 2019
24 °C

ಜಿಲ್ಲಾಧಿಕಾರಿ ವರ್ಗ: ಹೆದ್ದಾರಿ ಬಂದ್‌ಗೆ ಕರೆ

Published:
Updated:

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರ ವರ್ಗಾವಣೆ ಖಂಡಿಸಿ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲ್ಲೂಕಿನ ಚದಲುಪುರ ಕ್ರಾಸ್‌ ಬಳಿ ಶನಿವಾರ ಬೆಳಿಗ್ಗೆ 11ಕ್ಕೆ ರಾಷ್ಟ್ರೀಯ ಹೆದ್ದಾರಿ–7ರ ಬಂದ್‌ಗೆ ಕರೆ ನೀಡಲಾಗಿದೆ.

ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ, ಜಿಲ್ಲಾ ರೇಷ್ಮೆ ಹಿತರಕ್ಷಣಾ ಸಮಿತಿ, ಶಾಶ್ವತ ನೀರಾವರಿ ಹೋರಾಟ ಸಮಿತಿ, ಬಯಲುಸೀಮೆ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಯುವಸೇನೆ, ದ್ರಾಕ್ಷಿ ಬೆಳೆಗಾರರ ಸಂಘ, ಭೋಗ ನಂದೀಶ್ವರ ತ್ರಿಚಕ್ರ ವಾಹನ ಚಾಲಕರ ಸಂಘ, ದೇಶಪ್ರೇಮಿ ಯುವಕರ ಸಂಘ ಮತ್ತು ಭಾರತೀಯ ಕಿಸಾನ್ ಸಂಘ ಈ ಬಂದ್‌ಗೆ ಕೈಜೋಡಿಸಿವೆ.

Post Comments (+)