ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಬೆಳೆ ವಿಮೆ ವಿಚಾರದಲ್ಲಿ ವ್ಯವಸ್ಥಾಪಕರ ನಿರ್ಲಕ್ಷ್ಯಕ್ಕೆ ಆಕ್ರೋಶ

Last Updated 26 ಜೂನ್ 2020, 10:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಬಾಗೇಪಲ್ಲಿ ತಾಲ್ಲೂಕಿನ ಕಾರ್ಪೋರೇಷನ್ ಬ್ಯಾಂಕ್‌ ವ್ಯವಸ್ಥಾಪಕರ ಬೇಜವಾಬ್ದಾರಿತನದಿಂದ 141 ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆಯಾಗಿಲ್ಲ. ಕೂಡಲೇ ಪರಿಹಾರ ಹಣ ಬಿಡುಗಡೆಗೊಳಿಸದಿದ್ದರೆ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ರೈತಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2018–19ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಅಡಿ ಬಾಗೇಪಲ್ಲಿ ತಾಲ್ಲೂಕಿನ 141 ರೈತರು ಮುಸುಕಿನ ಜೋಳ, ನೆಲಗಡಲೆ, ತೊಗರಿ, ರಾಗಿ ಬೆಳೆಗಳಿಗೆ ವಿಮೆ ಮಾಡಿಸಿದ್ದರು. ಆದರೆ ಬ್ಯಾಂಕ್‌ ವ್ಯವಸ್ಥಾಪಕ ವಿಮಾ ಕಂಪೆನಿಗೆ ತಪ್ಪು ಮಾಹಿತಿ ನೀಡಿದ ಕಾರಣ ಈವರೆಗೆ ಪರಿಹಾರ ಹಣ ದೊರೆತಿಲ್ಲ’ ಎಂದು ಆರೋಪಿಸಿದರು.

‘ಕಳೆದ ಅಕ್ಟೋಬರ್‌ನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ವಿಮೆ ಮಾಡಿಸಿದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಬ್ಯಾಂಕ್‌ ಅಧಿಕಾರಿಗಳಿಗೆ ವರದಿ ನೀಡಿದರೂ ಈವರೆಗೆ ರೈತರಿಗೆ ನ್ಯಾಯ ದೊರೆತಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT