ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ | ಜಾತ್ರೆಯಲ್ಲಿ ಭಿಕ್ಷಾಟನೆ: ತಾಯಿ, ಮಕ್ಕಳ ರಕ್ಷಣೆ

Published 23 ಮೇ 2024, 13:27 IST
Last Updated 23 ಮೇ 2024, 13:27 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕಿನ ದೇವರಗುಡಿಪಲ್ಲಿ(ಗಡಿದಂ) ಲಕ್ಷ್ಮಿವೆಂಕಟರಮಣಸ್ವಾಮಿ ಜಾತ್ರೆಯಲ್ಲಿ ಬಿಕ್ಷಾಟನೆಯಲ್ಲಿ ತೊಡಗಿದ್ದ ತಾಯಿ, ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಹೂ ಇಲಾಖೆಗಳ ಅಧಿಕಾರಿಗಳು ಗುರುವಾರ ಮಿಂಚಿನ ಕಾರ್ಯಾಚರಣೆ ನಡೆಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ.

ಭಿಕ್ಷಾಟನೆ ಮಾಡಿದ್ದ ಐವರು ಮಕ್ಕಳು ಮತ್ತು ತಾಯಿಂದಿರನ್ನು ರಕ್ಷಣೆ ಮಾಡಿ, ಪುರ್ನವಸತಿ ಕಲ್ಪಿಸುವಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ.

ತಾಲ್ಲೂಕು ಶಿಶು ಕಲ್ಯಾಣಾಧಿಕಾರಿ ಕೆ.ಬಿ.ರಾಮಚಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ ಆರ್.ಕೆ.ವೆಂಕಟೇಗೌಡ, ಅಂಗನವಾಡಿ ಮೇಲ್ವಿಚಾರಕಿಯರಾದ ಅನ್ಸೂಬಾಯಿ, ಬಸವ್ವ, ರಾಧಿಕಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT