ಚಿಂತಾಮಣಿ: ರಾಜ್ಯ ಸರ್ಕಾರಿ ನೌಕರರ 2026ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟವು ಇದೇ 23ರಿಂದ 25ರವರೆಗೆ ಮೂರು ದಿನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಅಶೋಕಕುಮಾರ್ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾಕೂಟ ಆಯೋಜಿಸಲಿದೆ. ಸರ್ಕಾರಿ ನೌಕರರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿರುವ (ಗುಂಪು ಆಟಗಳಲ್ಲಿ ಪ್ರಥಮ, ಅಥ್ಲೆಟಿಕ್ಸ್ನಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ) ಕ್ರೀಡಾಪಟುಗಳು ಮಾತ್ರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ನುಡಿದರು.

ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಮೊದಲ ದಿನ ಸ್ಥಳದಲ್ಲಿ ತಯಾರಿಸಿದ ವಸ್ತುಗಳನ್ನು ಇಡಬೇಕು. 2ನೇ ದಿನ ತೀರ್ಪುಗಾರರು ಪರಿಶೀಲಿಸುತ್ತಾರೆ. ಕ್ರೀಡಾ ಸ್ಪರ್ಧೆಗಳಲ್ಲಿ, ಸಂಗೀತ ನೃತ್ಯ, ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ಅಗತ್ಯವಿರುವ ಸಲಕರಣೆಗಳನ್ನು ತಾವೇ ತರಬೇಕು. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಗಳ ತುಣಕುಗಳಿಗೆ ಅವಕಾಶವಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.