ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ | ಹನುಮ ಜಯಂತಿ ಪ್ರಯುಕ್ತ ಹನುಮನಿಗೆ ವೀಳ್ಯದೆಲೆ ಅಲಂಕಾರ

Published 24 ಡಿಸೆಂಬರ್ 2023, 13:30 IST
Last Updated 24 ಡಿಸೆಂಬರ್ 2023, 13:30 IST
ಅಕ್ಷರ ಗಾತ್ರ

ಚಿಂತಾಮಣಿ: ಆಲಂಬಗಿರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಭಾನುವಾರ ಆಂಜನೇಯಸ್ವಾಮಿಗೆ ವೀಳ್ಯದೆಲೆ ಹಾಗೂ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು.

ದೇವಾಲಯವನ್ನು ವಿದ್ಯುತ್ ದೀಪಗಳಿಂದ ಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಅಷ್ಟೋತ್ತರ ಸಹಿತ ಅಷ್ಟಾವಧಾನ ಸೇವೆಯನ್ನು ಸಲ್ಲಿಸಿ ಮಹಾ ಮಂಗಳಾರತಿ ಮಾಡಲಾಯಿತು. ಹನುಮಜಯಂತಿ ಪ್ರಯುಕ್ತ ಸುತ್ತಮುತ್ತಲ ಗ್ರಾಮಗಳು ಹಾಗೂ ದೂರದಿಂದ ಬಂದ ಭಕ್ತರು ದೇವಾಲಯದಲ್ಲಿ ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು.

ಗ್ರಾಮಸ್ಥರಿಂದ ಸಂಕೀರ್ತನೆ ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ಆಗಮಿಸಿ ರಾಮದೂತನ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT