ಶಿಡ್ಲಘಟ್ಟ: ಹಿಂದೆ ಬೆಟ್ಟಗುಡ್ಡಗಳ ಪ್ರದೇಶವನ್ನು ಪಾಳೇಗಾರರು ಆಯ್ದುಕೊಂಡು ತಮ್ಮ ರಕ್ಷಣಾ ಸ್ಥಾನವನ್ನಾಗಿಸಿಕೊಳ್ಳುತ್ತಿದ್ದರು. ಅಂತಹ ಪ್ರದೇಶಗಳು ಈಗಿನ ಕಾಲದಲ್ಲಿ ಹಳೆಯ ದಿನಗಳನ್ನು ನೆನಪಿಸುವ ನೈಸರ್ಗಿಕ ಆಕರ್ಷಕ ಪ್ರದೇಶಗಳಾಗಿ ಮಾರ್ಪಾಡಾಗಿವೆ.

ತಾಲ್ಲೂಕಿನ ಗಂಜಿಗುಂಟೆ ಗ್ರಾಮಕ್ಕೆ ಹೊಂದಿಕೊಂಡಿರುವ ಗೆರಿಗಿಗುಂಡು ಇಂಥಹ ಸೋಜಿಕ ಸ್ಥಳಗಳಲ್ಲೊಂದು. ಊಹಿಸಲಸಾಧ್ಯವಾದ ಬೃಹದಾಕಾರದ ಕಲ್ಲಿನ ಗುಂಡು ಇಲ್ಲಿ ಗುಡ್ಡದ ಮೇಲ್ಭಾಗದಲ್ಲಿದೆ. ಈ ಗುಡ್ಡದಲ್ಲಿ ಹಲವಾರು ದೊಡ್ಡ ಆಕಾರದ ಕಲ್ಲುಗುಂಡುಗಳಿದ್ದರೂ ಈ ಗುಂಡು ಮಾತ್ರ ಅತಿ ದೊಡ್ಡದು. ಇದನ್ನು ಹಿಂದಿನಿಂದಲೂ ಸ್ಥಳೀಯರು ಗೆರಿಗಿಗುಂಡು ಎಂದೇ ಕರೆಯುತ್ತಾರೆ.

ಗೆರಿಗಿಗುಂಡಿನ ಮೇಲೆ ಹಿಂದೆ ಪಾಳೆಗಾರರು ನಿರ್ಮಿಸಿದ್ದ ಬುರುಜಿನ ಕೆಲ ಭಾಗವಿದ್ದು, ಇದು ಅವರ ರಕ್ಷಣಾ ಸ್ಥಾನವಾಗಿರಬಹುದೆಂಬುದಕ್ಕೆ ಪುರಾವೆ ಸಿಗುತ್ತದೆ. ಇಲ್ಲಿ ಮನುಷ್ಯನ ಮುಖದ ಆಕಾರದ ಕಲ್ಲು ಬಂಡೆಗಳು, ತ್ರಿಕೋನಾಕಾರದ್ದು, ಇನ್ನೇನು ಬೀಳುತ್ತದೆಯೋ ಎಂದು ಗಾಬರಿಹುಟ್ಟಿಸುವಂತಹ ನಾನಾ ರೂಪಗಳನ್ನು ಗುರುತಿಸಬಹುದಾದ ಬಂಡೆಕಲ್ಲುಗಳಿವೆ.

ಗ್ರಾಮಸ್ಥರು ಗೆರಿಗಿಗುಂಡಿನ ಕೆಳಗೆ ಗೆರಿಗಿಲಮ್ಮ ದೇವಾಲಯ ನಿರ್ಮಿಸಿದ್ದಾರೆ. ಗೆರಿಗಿಗುಂಡು ಮುಂಭಾಗದಲ್ಲಿ ಮುಜರಾಯಿ ಇಲಾಖಾ ವ್ಯಾಪ್ತಿಗೆ ಬರುವ ಲಕ್ಷ್ಮಿನರಸಿಂಹ ದೇವಾಲಯವಿದೆ. ಕಾಮನ ಹುಣ್ಣಿಮೆಯಂದು ಜಾತ್ರೆ ನಡೆಸಲಾಗುತ್ತದೆ.

‘ಪಾಳೇಗಾರರು ಇಲ್ಲಿ ಕೋಟೆಯನ್ನು ನಿರ್ಮಿಸಿದ್ದರಂತೆ. ಅವರು ಇಲ್ಲಿ ಏಳು ಕೊಪ್ಪರಿಗೆ ನಿಧಿ ನಿಕ್ಷೇಪವನ್ನು ಇಟ್ಟಿರುವರೆಂದು ದಂತಕಥೆಗಳು ಈಗಲೂ ಗ್ರಾಮದ ಹಿರಿಯರ ಬಾಯಲ್ಲಿ ಕೇಳಬಹುದು. ಪಾಳೇಗಾರರು ಗಂಜಿಗುಂಟೆಯ ಸುತ್ತಮುತ್ತಲೂ ಏಳು ಕೆರೆ ನಿರ್ಮಿಸಿದ್ದರು. ಇಲ್ಲಿ ಬಹಳ ಜನರಿದ್ದು, ಪ್ರತಿದಿನ ಅನ್ನ ಬಸಿದ ಗಂಜಿ ಒಂದು ದೊಡ್ಡ ಗುಣಿಯಲ್ಲಿ ಶೇಖರಣೆಯಾಗುತ್ತಿತ್ತು. ಅದರಿಂದಲೇ ಈ ಪ್ರದೇಶಕ್ಕೆ ಗಂಜಿಗುಂಟೆ ಎಂಬ ಹೆಸರು ಬಂತು. ಇಲ್ಲಿನ ಗೆರಿಗಿಗುಂಡಿನ ಕೆಳಗೆ ಒಂದು ದೊಡ್ಡ ಗವಿ ಇದೆ. ಅದರಲ್ಲಿ ಸಾಧುಗಳು ವಾಸವಿರುತ್ತಾರೆ’ ಎಂದು ಶಿಕ್ಷಕ ಎಲ್.ವಿ.ವೆಂಕಟರೆಡ್ಡಿ ತಿಳಿಸಿದರು.

‘ವರ್ಷಕ್ಕೊಮ್ಮೆ ಮಾಘ ಪೌರ್ಣಮಿಯಂದು ಗುರುವಂದನಾ ಹಾಗೂ ಭಜನೆ ಕಾರ್ಯಕ್ರಮವನ್ನು ಗ್ರಾಮಸ್ಥರು ಹಮ್ಮಿಕೊಳ್ಳುತ್ತಾರೆ. ಇಲ್ಲಿಗೆ ಹತ್ತಿರವಿರುವ ತಲಕಾಯಲಬೆಟ್ಟದಲ್ಲಿ ನಡೆಯುವ ರಥೋತ್ಸವದ ದಿನ ಇಲ್ಲಿನ ಗೆರಿಗಿಗುಂಡು ಗವಿಯಲ್ಲಿ ಅನ್ನಸಂತರ್ಪಣೆ ಮಾಡಲಾಗುತ್ತದೆ. ಮೇಲಿನಿಂದ ಕಾಣುವ ಭೂದೃಶ್ಯಗಳು ಕಣ್ಣಿಗೆ ಆನಂದ ನೀಡಿದರೆ, ಹೊರಗೆ ಎಷ್ಟೇ ಬಿಸಿಯಿದ್ದರೂ ಗೆರಿಗಿಗುಂಡಿನ ಕೆಳಗೆ ಸದಾ ತಂಪಾಗಿದ್ದು ಜೀವಕ್ಕೆ ತಂಪೆನಿಸುವಂತಿರುತ್ತದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.