ಶುಕ್ರವಾರ, ಅಕ್ಟೋಬರ್ 7, 2022
28 °C

ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಡ್ಲಘಟ್ಟ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಬೊಮ್ಮನಹಳ್ಳಿ ಗೇಟ್ ಸಮೀಪ ಭಾನುವಾರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೊಮ್ಮ ನಹಳ್ಳಿ - ಸೋಣ್ಣೇನಹಳ್ಳಿ ಗ್ರಾಮಗಳ ಮಾರ್ಗ ಮಧ್ಯೆ ಇರುವ ಮೋರಿ ಬಳಿ ಈ ಘಟನೆ ನಡೆದಿದೆ. ಬೈಕ್ ಸಂಪೂರ್ಣ ಜಖಂಗೊಂಡಿದೆ.

ಚಿಕ್ಕಬಳ್ಳಾಪುರದ ನಿವಾಸಿ ಕೆ.ಎಸ್‌.ಚೇತನ್  ಮೃತ. ಇವರು ಎಜುಕೇಶನ್ ಇವೆಂಟ್ ಭಾಗವಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ತಂತ್ರಜ್ಞಾನದ ಬಗ್ಗೆ ಉಪನ್ಯಾಸ ನೀಡಲು ತಾಲ್ಲೂಕಿನ ಪಿಂಡಿ ಪಾಪನಹಳ್ಳಿ ಬಳಿ ಇರುವ ಬೃಂದಾ ಪಬ್ಲಿಕ್ ಸ್ಕೂಲ್ ಬಂದಿದ್ದರು ಎಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು