ಬುಧವಾರ, ನವೆಂಬರ್ 25, 2020
25 °C

ಮೌಲಾನಾ ಅಬ್ದುಲ್ ಕಲಾಂ ಆಜಾದ್‌ ಜನ್ಮ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಡಿಬಂಡೆ: ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಉರ್ದು ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ತಹಶೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ದೇಶದಲ್ಲಿ ಮೊದಲು ಶಿಕ್ಷಣ ಕ್ರಾಂತಿ ಪ್ರಾರಂಭಿಸಿದ್ದು ಮೌಲಾನಾ ಅಬ್ದುಲ್ ಕಲಾಂ ಆಜಾದ್. ಶಿಕ್ಷಣ ಪಡೆಯಲು ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಓದಬೇಕೆಂಬ ಛಲವೊಂದಿರಬೇಕು ಎಂದು ಹೇಳಿದರು.

ಶಿಕ್ಷಣ ಇಲಾಖೆಯ ಶಶಿಕಲಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಮಾತ ನಾಡಿದರು. ರಾಜ್ಯ ಉರ್ದು ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮೊಹಮದ್ ನಾಸೀರ್, ನಿರ್ದೇಶಕರಾದ ಜಾಕೀರ್, ಸಮಿಉಲ್ಲಾ, ಅಜ್ಮಲ್ ‌ಖಾನ್, ಮುನೀರ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು