ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೌರಿಬಿದನೂರು: ಬಿಜೆಪಿ ಸದಸ್ಯತ್ವ ಅಭಿಯಾನ

Published 29 ಆಗಸ್ಟ್ 2024, 14:22 IST
Last Updated 29 ಆಗಸ್ಟ್ 2024, 14:22 IST
ಅಕ್ಷರ ಗಾತ್ರ

ಗೌರಿಬಿದನೂರು: ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನ ಆವರಣದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಮುಖಂಡ ಎನ್.ಎಂ ರವಿನಾರಾಯಣ ರೆಡ್ಡಿ, ಪ್ರತಿ ಬೂತ್‌ನಲ್ಲಿ ಕನಿಷ್ಠ 300 ಜನರನ್ನು ಸದಸ್ಯರಾಗಿ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ನಗರ ಘಟಕದ ಅಧ್ಯಕ್ಷ ಮಾರ್ಕೆಟ್ ಮೋಹನ್ ಮಾತನಾಡಿ, ಬಿಜೆಪಿ ವಿಶ್ವದಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದ ಪಕ್ಷವಾಗಿದೆ. ಸಾಮಾಜಿಕ ನ್ಯಾಯ ನೀಡುವ ಪಕ್ಷವಾಗಿದೆ. ಸಾಮಾನ್ಯ ಕಾರ್ಯಕರ್ತರಿಗೂ ಪಕ್ಷದಲ್ಲಿ ಗೌರವವಿದೆ ಎಂದು ತಿಳಿಸಿದರು.‌

ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಮೇಶ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮುರುಳಿಸ್ವಾಮಿ, ಬಿಜಿ ವೇಣುಗೋಪಾಲ್ ರೆಡ್ಡಿ,ಮಧುಸೂದನ್ ರೆಡ್ಡಿ,ನಾಗಭೂಷಣಸ್ವಾಮಿ, ಚೈತ್ರ, ಜಯಣ್ಣ, ವೇಣುಮಾಧವ್, ಕೊಡಿರ್ಲಪ್ಪ ರಘು, ವೆಂಕಟಾದ್ರಿ ,ಅಜಯ್,ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT