ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಜಯ

ವಿವಿಧ ಗ್ರಾಮ ಪಂಚಾಯಿತಿಯ ಐದು ಸ್ಥಾನಕ್ಕೆ ನಡೆದ ಉಪ ಚುನಾವಣೆ
Last Updated 31 ಡಿಸೆಂಬರ್ 2021, 7:29 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳ ಐದು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಗೆಲುವು
ಸಾಧಿಸಿದ್ದಾರೆ.

ಮಿಣಕನಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯನಕಲ್ಲು ಗ್ರಾಮ ಪಂಚಾಯಿತಿ ಸದಸ್ಯರಾಗಿ ಸರೋಜಾ 390 ಮತಗಳನ್ನು ಪಡೆದು 57 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಗೌಡಗೆರೆ ಗ್ರಾಮ ಪಂಚಾಯಿತಿಯ ವರವಣಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ರತ್ನಮ್ಮ ಆಯ್ಕೆ ಆಗಿದ್ದಾರೆ. ಅವರು 495 ಮತಗಳನ್ನು ಪಡೆದು 229 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಎಸ್.ಗೊಲ್ಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕರಿಗಾನಪಾಳ್ಯ ಗ್ರಾಮ ಪಂಚಾಯಿತಿ ಸದಸ್ಯರಾಗಿ ರುಕ್ಮಿಣಮ್ಮ
ಆಯ್ಕೆ ಆಗಿದ್ದಾರೆ. ಅವರು 219 ಮತಗಳನ್ನು ಪಡೆದಿದ್ದು 4 ಮತಗಳ ಅಂತರದಿಂದ ಗೆಲವು
ಸಾಧಿಸಿದ್ದಾರೆ.

ಮುದ್ದೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಂಗಾನಹಳ್ಳಿಯ ಓಂ ಶಕ್ತಿಮೂರ್ತಿ 312 ಮತಗಳನ್ನು ಪಡೆದು 101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಜ್ಜವಾರ ಗ್ರಾ.ಪಂ ವ್ಯಾಪ್ತಿಯ ನಾಯನಹಳ್ಳಿ ಕ್ಷೇತ್ರಕ್ಕೆ ನಡೆದ ‌ಉಪಚುನಾವಣೆಯಲ್ಲಿ ಪದ್ಮಾ ಅವರು 669 ಮತಗಳನ್ನು ಪಡೆದು 277 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಅಭಿವೃದ್ಧಿಗೆ ಜಯ: ‘ಐದು ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿರುವುದು ಸಂತಸ ತಂದಿದೆ.ಇದು ಜಿಲ್ಲೆಯ ಜನರು ಅಭಿವೃದ್ಧಿ ಪರ ಇದ್ದಾರೆ ಎಂಬುದನ್ನು ಸಾಬೀತುಪಡಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ತಿಳಿಸಿದ್ದಾರೆ.

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಕಡೆಗಿನ ನಮ್ಮ ನಡೆಗೆ ಮತ್ತಷ್ಟು ಬಲ ನೀಡಿದೆ. ಪ್ರತಿಪಕ್ಷಗಳ ಕೆಲ ನಾಯಕರ ಅಪಪ್ರಚಾರಗಳಿಗೆ ಕಿವಿಗೊಡದೆ ಮತದಾರರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಮತದಾರರಿಗೆ ಧನ್ಯವಾದಗಳು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT