ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿದ ಬಿಜೆಪಿ ಟಿಕೆಟ್‌ ಚರ್ಚೆ

ಬಾಗೇಪಲ್ಲಿ: ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪಗೆ ದೊರೆಯುವುದೇ ಅವಕಾಶ?
Last Updated 12 ಜೂನ್ 2022, 5:58 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಟಿಕೆಟ್ 2023ರ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ದೊರೆಯುತ್ತದೆ ಎನ್ನುವ ವಿಚಾರ ಬಾಗೇಪಲ್ಲಿ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್‌ಗೆ ಪೈಪೋಟಿ ಎದುರಾಗಿರುವ ಕ್ಷೇತ್ರದಲ್ಲಿ ಬಾಗೇಪಲ್ಲಿ ಪ‍್ರಮುಖವಾಗಿದೆ.

ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲ್ಲೂಕುಗಳನ್ನು ಒಳಗೊಂಡಂತೆ ಈ ವಿಧಾನಸಭಾ ಕ್ಷೇತ್ರವಿದೆ. ಚಿಕ್ಕಬಳ್ಳಾಪುರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ.ಕೆ. ಸುಧಾಕರ್ ಇದ್ದಾರೆ.ಶಿಡ್ಲಘಟ್ಟ, ಚಿಂತಾಮಣಿ ಮತ್ತು ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ‘ನನಗೆ ಟಿಕೆಟ್ ದೊರೆಯುತ್ತದೆ’ ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿ ಪಕ್ಷ ಸಂಘಟಿಸುವ ನಾಯಕರು ಸದ್ಯ ಬಿಜೆಪಿಯಲ್ಲಿ ಇಲ್ಲ. ಈ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಬಲ ನಾಯಕರ ಕೊರತೆ ಇದೆ.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನದೇ ನೆಲೆಯನ್ನು ಹೊಂದಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರೂ 2008ರ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿತ್ತು. ಕಾರ್ಯಕರ್ತರ ಪಡೆಯೂ ಇದೆ.

ಈ ಎಲ್ಲ ದೃಷ್ಟಿಯಿಂದಟಿಕೆಟ್‌ಗೆ ಈಗಲೇ ಪೈಪೋಟಿ ಆರಂಭವಾಗಿದೆ. ಈ ಪೈಪೋಟಿ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಹೊರಗಿನವರು ಎನ್ನುವ ಚರ್ಚೆಗೂ ಕಾರಣವಾಗಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ. ರಾಮಲಿಂಗಪ್ಪ,ನಗರ ಹೊರವರ್ತುಲ ಪ್ರಾಧಿಕಾರದ ಅಧ್ಯಕ್ಷ ಸಿ. ಮುನಿರಾಜು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಸಮಾಜ ಸೇವಕರಾಗಿ ಕ್ಷೇತ್ರ ಪ್ರವೇಶಿಸಿರುವ ಬೆಂಗಳೂರಿನ ಸತೀಶ್ ರೆಡ್ಡಿ ಸಹ ಬಿಜೆಪಿ ಟಿಕೆಟ್ ಮೇಲೆ ದೃಷ್ಟಿ ಬೀರಿದ್ದಾರೆ ಎನ್ನಲಾಗುತ್ತಿದೆ. ರಾಮಲಿಂಗಪ್ಪ ಮತ್ತು ಮುನಿರಾಜು ಕ್ಷೇತ್ರದಲ್ಲಿ ಪ್ರಬಲವಾಗಿರುವ ಬಲಿಜ ಸಮುದಾಯಕ್ಕೆ ಸೇರಿದವರು.

ಪಕ್ಷದ ಜಿಲ್ಲಾ ಅಧ್ಯಕ್ಷ ಟಿ. ರಾಮಲಿಂಗಪ್ಪ, ಈ ಹಿಂದೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಆಗಿದ್ದವರು. ಬಾಗೇಪಲ್ಲಿಯವರೇ ಆದ ರಾಮಲಿಂಗಪ್ಪ ಹಿಂದಿನಿಂದಲೂ ಪಕ್ಷ ನಿಷ್ಠೆ ಮೆರೆದವರು. ಆರ್‌ಎಸ್‌ಎಸ್‌, ಸಂಸದ ಪಿ.ಸಿ. ಮೋಹನ್‌, ಸಚಿವ ಡಾ.ಕೆ. ಸುಧಾಕರ್ ಸೇರಿದಂತೆ ಹಲವು ನಾಯಕರ ಜತೆ ಉತ್ತಮ ಒಡನಾಟ ಹೊಂದಿದ್ದಾರೆ. 2018ರ ಚುನಾವಣೆಯಲ್ಲಿಯೂ ರಾಮಲಿಂಗಪ್ಪ ಟಿಕೆಟ್‌ಗೆ ಪ್ರಯತ್ನಿಸಿದ್ದರು. ಪಕ್ಷಕ್ಕೆ ದುಡಿದಿರುವ ತಮ್ಮನ್ನು ವರಿಷ್ಠರು ಟಿಕೆಟ್ ವಿಚಾರದಲ್ಲಿ ಪರಿಗಣಿಸುವರು ಎನ್ನುವ ವಿಶ್ವಾಸ ಅವರಲ್ಲಿದೆ.

ಸ್ಥಳೀಯರಲ್ಲದಿದ್ದರೂ ‘ಬಾಗೇಪಲ್ಲಿ ತಮ್ಮ ತವರೂರು’ ಎಂದು ಹೇಳುವ ಬಹುಭಾಷಾ ನಟ ಸಾಯಿ­ಕುಮಾರ್‌ 2008ರ ವಿಧಾನಸಭೆ ಚುನಾ­ವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಕಾಂಗ್ರೆಸ್‌ನ ಎನ್. ಸಂಪಂಗಿ ವಿರುದ್ಧ 26 ಸಾವಿರ ಮತ ಪಡೆದು 6,000 ಮತಗಳ ಅಂತರ­ದಿಂದ ಪರಾಭವಗೊಂಡರು. 2018ರ ಚುನಾವಣೆಯಲ್ಲಿ ಮತ್ತೆ ಅವರೇ ಬಿಜೆಪಿಯಿಂದ ಕಣಕ್ಕಿಳಿದರು. ಆಗ 4,140 ಮತಗಳನ್ನಷ್ಟೇ ಪಡೆದರು.

ಮುನಿರಾಜು ಓಡಾಟ: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆಗಿರುವ ಮುನಿರಾಜು 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗೆ ಪ್ರಯತ್ನಿಸಿ ವಿಫಲರಾಗಿದ್ದರು. ಈಗ ಬಾಗೇಪಲ್ಲಿ ಕ್ಷೇತ್ರದ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಮಕ್ಕಳಿಗೆ ನೋಟ್ ಬುಕ್‌ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು
ಸಂಘಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT