ಬುಧವಾರ, ಏಪ್ರಿಲ್ 1, 2020
19 °C

ಬಿಜೆಪಿಯಲ್ಲೂ ಬ್ಲಾಕ್‌ಮೇಲ್ ಕೆಲಸ ಶುರು: ಶಾಸಕ ಎನ್.ಎಚ್‌.ಶಿವಶಂಕರರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಗೆದ್ದ ಮೇಲೆ ಸೋತವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಬ್ಲಾಕ್‌ಮೇಲ್ ಶುರು ಮಾಡಿದ್ದಾರೆ. ಅವರು ಎಲ್ಲಿದ್ದರೂ ಬ್ಲಾಕ್‌ಮೇಲ್ ಗಿರಾಕಿಗಳೇ’ ಎಂದು ಶಾಸಕ ಎನ್.ಎಚ್‌.ಶಿವಶಂಕರರೆಡ್ಡಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ ಚುನಾವಣೆಯಲ್ಲಿ ಗೆದ್ದವರ ಬ್ಲಾಕ್‌ಮೇಲ್ ರಾಜಕಾರಣದಿಂದ ಬಿಜೆಪಿಗಾಗಿ 20 ವರ್ಷಗಳಿಂದ ದುಡಿದ ಹಿರಿಯ ಮುಖಂಡರು ಅರ್ಹತೆ ಇದ್ದರೂ ಸಚಿವ ಸ್ಥಾನದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಹೆಚ್ಚು ದಿನ ಉಳಿಯವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರೀ ಅಧಿಕಾರ ಹಾಗೂ ಚುನಾವಣೆ ನಡೆಸಲು ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಜನಪರವಾದ ಅಭಿವೃದ್ಧಿ ಕಾಳಜಿ ಇಲ್ಲ’ ಎಂದು ಆರೋಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು