ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯ

Last Updated 1 ಮಾರ್ಚ್ 2021, 4:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿ ಬಳಿ ಸಂಭವಿಸಿದ ಜಿಲೆಟಿನ್‌ ಸ್ಫೋಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ನೈಜ ಹೋರಾಟಗಾರರ ತಂಡ ಒತ್ತಾಯಿಸಿದೆ.

ಭಾನುವಾರ ಘಟನಾ ಸ್ಥಳಕ್ಕೆ ನೈಜ ಹೋರಾಟಗಾರರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

‘ಹಿರೇನಾಗವಲ್ಲಿ ಸ್ಫೋಟ ಸಂಭವಿಸಿ ಒಂದು ವಾರ ಕಳೆದರೂ ಘಟನಾ ಸ್ಥಳದಲ್ಲಿ ಮೃತದೇಹಗಳ ಅವಶೇಷಗಳ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದು ಪೊಲೀಸ್‌ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷಕ್ಕೆ ಸ್ಪಷ್ಟ ನಿದರ್ಶನ’ ಎಂದು ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ ಆರೋಪಿಸಿದರು.

‘ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಆದರೆ, ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದಕ್ಕೆ ಜಿಲ್ಲಾಡಳಿತ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ಚಿಕ್ಕಬಳ್ಳಾಪುರನಲ್ಲಿ ಅತಿ ಹೆಚ್ಚಾಗಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ನಡೆಸಲಾಗುತ್ತಿದೆ. ಇದರ ವಿರುದ್ಧ ಪೊಲೀಸ್‌ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲೆಟಿನ್‌ ಸ್ಫೋಟಕ ಸರಬರಾಜು ಕಾನೂನಿನಡಿ ಬರುತ್ತದೆ. ಹಾಗಾಗಿ ಸರ್ಕಾರದ ವೈಫಲ್ಯಕ್ಕೆ ದುರಂತಕ್ಕೆ ಪ್ರಮುಖ ಕಾರಣ’ ಎಂದು ಕಿಡಿಕಾರಿದರು.

ವಾಸುದೇವ್ ಮೂರ್ತಿ, ನಾಗಭೂಷನ್‌, ಹರಿಪ್ರಸಾದ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT