ಶನಿವಾರ, ನವೆಂಬರ್ 23, 2019
18 °C
ವಿಷ್ಣುವರ್ಧನ್ ಸೇನಾ ಸಮಿತಿ ವತಿಯಿಂದ ನಗರದಲ್ಲಿ ರಕ್ತದಾನ ಶಿಬಿರ

ರಕ್ತ ದಾನವೇ ಅತಿ ಶ್ರೇಷ್ಠ ದಾನ

Published:
Updated:
Prajavani

ಚಿಕ್ಕಬಳ್ಳಾಪುರ: ‘ರಕ್ತದಾನದಿಂದ ಸಂಕಷ್ಟದಲ್ಲಿರುವವರಿಗೆ ಹೊಸ ಜೀವನ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಲು ಮುಂದೆ ಬರಬೇಕು’ ಎಂದು ವಿಷ್ಣು ಸೇನಾ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಗಂಗಾಧರ್ ಹೇಳಿದರು.

ನಟ ವಿಷ್ಣುವರ್ಧನ್ ಅವರ 69ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಷ್ಣುವರ್ಧನ್ ಸೇನಾ ಸಮಿತಿ, ಭಾರತೀಯ ರೆಡ್‌ಕ್ರಾಸ್‌ ಜಿಲ್ಲಾ ರಕ್ತನಿಧಿ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

‘ರಕ್ತದಾನದಿಂದ ಒಳ್ಳೆಯ ಕೆಲಸ ಮಾಡಿದ ತೃಪ್ತಿ ಸಿಗುತ್ತದೆ. ಅಪಘಾತದ ಸಂದರ್ಭದಲ್ಲಿ ಗಾಯಾಳುಗಳಿಗೆ ಸಹಾಯ ಮಾಡಲು ಹೆದರಬಾರದು. ಗಾಯಾಳುವಿಗೆ ರಕ್ತದ ಅವಶ್ಯಕತೆ ಇದ್ದರೆ ಕೂಡಲೇ ರಕ್ತ ನೀಡಲು ಅಥವಾ ಒದಗಿಸಿಕೊಡಲು ಮುಂದಾಗಬೇಕು. ಎಲ್ಲರೂ ಆಗಾಗ್ಗೆ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆ ನೀಗಿಸಲು ಕೈಜೋಡಿಸಬೇಕು’ ಎಂದು ತಿಳಿಸಿದರು.

‘ಎಲ್ಲ ದಾನಗಳಲ್ಲೇ ರಕ್ತದಾನ ಶ್ರೇಷ್ಠದಾನ. ರಕ್ತದಾನ ಮಾಡುವುದು ಒಳ್ಳೆಯ ಕಾರ್ಯ. ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಜೊತೆಗೆ ವ್ಯಕ್ತಿಯು ಆರೋಗ್ಯವಂತ ಜೀವನ ನಡೆಸಬಹುದು’ ಎಂದರು. ವಿಷ್ಣು ಸೇನಾ ಸಮಿತಿ ಜಿಲ್ಲಾ ಘಟಕ ಉಪಾಧ್ಯಕ್ಷ ವಾಸು, ಕಾರ್ಯದರ್ಶಿ ನರೇಂದ್ರ ಬಾಬು, ರಾಜೇಶ್, ಮುಖಂಡರಾದ ರಾಜು, ಗಣೇಶ್, ನರೇಶ್, ಕಿರಣ್, ಮುರಳಿ ಹಾಜರಿದ್ದರು.

ಪ್ರತಿಕ್ರಿಯಿಸಿ (+)