ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ರಾಜ್ಯದಲ್ಲಿ ಯಾವ ಪರಿಸ್ಥಿತಿ ಇದೆ ಎಂಬುದನ್ನು ಗಮನಿಸದ ಕೇಂದ್ರ: ಬಚ್ಚೇಗೌಡ

Published 1 ನವೆಂಬರ್ 2023, 21:25 IST
Last Updated 1 ನವೆಂಬರ್ 2023, 21:25 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಐದು ರಾಜ್ಯಗಳ ಚುನಾವಣೆಯತ್ತ ಕೇಂದ್ರ ಸರ್ಕಾರ ಗಮನ ನೀಡಿದೆ. ಯಾವ ರಾಜ್ಯದಲ್ಲಿ ಯಾವ ಪರಿಸ್ಥಿತಿ ಇದೆ ಎನ್ನುವ ಬಗ್ಗೆ ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ತಂಡ ಕಳುಹಿಸಿತ್ತು. ಬರದಿಂದ ರಾಜ್ಯದಲ್ಲಿ ₹33 ಸಾವಿರ ಕೋಟಿಯಷ್ಟು ಬೆಳೆ ಹಾನಿಯಾಗಿದೆ. ₹17 ಸಾವಿರ ಕೋಟಿ ಬರ ಪರಿಹಾರಕ್ಕೆ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಕೋರಿದೆ. ಅಲ್ಲದೆ, ಪ್ರತಿವರ್ಷ ನೀಡಬೇಕಾದ ರಾಜ್ಯದ ಪಾಲಿನ ಜಿಎಸ್‌ಟಿ ಹಣವನ್ನೂ ಕೇಂದ್ರ ಹಣಕಾಸು ಸಚಿವರು ಬಿಡುಗಡೆ ಮಾಡಿಲ್ಲ ಎಂದರು.

ಆಪರೇಷನ್ ಕಮಲದ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ. ಪಕ್ಷದ ವಿಷಯದಲ್ಲಿ ದಿನವೂ ಯಾರಾದರೂ ಒಬ್ಬರು ಮಾತನಾಡಬೇಕಾಗಿರುತ್ತದೆ. ಆದ ಕಾರಣ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಸಿ.ಟಿ.ರವಿ ಹೀಗೆ ದಿನ ಒಬ್ಬೊಬ್ಬರು ಮಾತನಾಡುವರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT