ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳ ಪುನಶ್ಚೇತನ ಪ್ರತಿಯೊಬ್ಬರ ಕರ್ತವ್ಯ

Last Updated 1 ಜುಲೈ 2019, 12:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಪ್ರತಿ ಮಗುವಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಸರ್ಕಾರಿ ಶಾಲೆಗಳು ಸದೃಢವಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳಿಂದ ನವ ಸಮಾಜ ನಿರ್ಮಾಣ ಮಾಡಲು ಸಾಧ್ಯ’ ಎಂದು ಶ್ರೀನಿವಾಸ ಚಾರಿಟಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನವೀನ್ ಶ್ರೀನಿವಾಸ್ ಹೇಳಿದರು.

ತಾಲ್ಲೂಕಿನ ನೆಲಮಾಕನಹಳ್ಳಿ ಮತ್ತು ಎಲೇಹಳ್ಳಿ ಶಾಲೆಗಳಲ್ಲಿ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣಿಸುತ್ತಿರುವ ಕಾರಣ ಶಾಲೆಗಳು ಮುಚ್ಚುವ ಹಂತದಲ್ಲಿವೆ. ದಾಖಲಾತಿಗಳನ್ನು ಹೆಚ್ಚಿಸಿ ಸರ್ಕಾರಿ ಶಾಲೆಗಳ ವೈಭವವನ್ನು ಹೆಚ್ಚಿಸುವುದು ನಮ್ಮ ಜನಪ್ರತಿನಿಧಿಗಳ ಆದ್ಯ ಕರ್ತವ್ಯ. ನಿಟ್ಟಿನಲ್ಲಿ ಸಾಮಾಜಿಕ ಕಳಕಳಿ ಹೊಂದಿರುವ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿಕೊಂಡು ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ತಿಳಿಸಿದರು.

ಟ್ರಸ್ಟ್ ಅಧ್ಯಕ್ಷ ಭರತ್, ಉಪಾಧ್ಯಕ್ಷ ಪವನ್, ನಿರ್ದೇಶಕರಾದ ವಿಘ್ನೇಶ್, ಧನುಷ್, ಶಶಾಂಕ್, ದಿನೇಶ್, ಮುಖಂಡ ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT