ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನ ಒಂದು ಉಮೇದುವಾರಿಕೆ ಸಲ್ಲಿಕೆ
Last Updated 14 ನವೆಂಬರ್ 2019, 15:58 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಗುರುವಾರ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಅಭ್ಯರ್ಥಿ ದೇವನಹಳ್ಳಿ ಡಿ.ಆರ್.ನಾರಾಯಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ, ತಾಲ್ಲೂಕು ಕಚೇರಿಗೆ ತೆರಳಿದ ನಾರಾಯಣಸ್ವಾಮಿ ಅವರು ಚುನಾವಣಾಧಿಕಾರಿಯೂ ಆಗಿರುವ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ‘ಕ್ಷೇತ್ರಕ್ಕೆ ಇವತ್ತು ಒಳ್ಳೆಯ ಶಾಸಕರು ಬೇಕಾಗಿದ್ದಾರೆ. ಇವತ್ತು ಕ್ಷೇತ್ರದಲ್ಲಿ ಜನರ ಸಮಸ್ಯೆ ಕೇಳುವವರಿಲ್ಲ. ಕೈಗಾರಿಕೆಗಳ ಅಭಿವೃದ್ಧಿಯಾಗಿಲ್ಲ. ನನಗೆ ಕ್ಷೇತ್ರದ ಪ್ರತಿಯೊಂದು ಸಮಸ್ಯೆಯ ಅರಿವಿದೆ. ಕ್ಷೇತ್ರದಲ್ಲಿಯೇ ಮನೆ ಮಾಡುವೆ. ಮುಂದಿನ ಎಲ್ಲ ಚುನಾವಣೆಗಳಲ್ಲಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದು ಹೇಳಿದರು.

‘ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ನಡೆಸಿರುವೆ. ಉತ್ತಮ ಬೆಂಬಲ ದೊರೆತಿದೆ. ಈ ಬಾರಿ ಹೊಸಬರಿಗೆ ಅವಕಾಶ ನೀಡಬೇಕು. ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಮಾಡುವ ಕನಸಿದೆ. ಪುನಃ ಸುಧಾಕರ್ ಅವರನ್ನೇ ಗೆಲ್ಲಿಸಿದರೆ ಮತ್ತೆ ಚುನಾವಣೆ ನೋಡಬೇಕಾಗಿ ಬರುತ್ತದೆ. ಈ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ತಿಳಿಸಿದರು.

‘ನಮಗೆ ಸ್ವತಂತ್ರ್ಯ ಬಂದು 70 ವರ್ಷಗಳು ಕಳೆದರೂ ಬಹುಜನರ ಬದುಕು ಬದಲಾಗಲೇ ಇಲ್ಲ. ಇಷ್ಟು ವರ್ಷಗಳಲ್ಲಿ ಜನರ ಮತ ಪಡೆದ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಸಂವಿಧಾನ ಜಾರಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿವೆ. ರಾಜ್ಯದಲ್ಲಿ ಇತ್ತೀಚಿಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಜನ ಬೇಸತ್ತಿದ್ದಾರೆ. ಅಧಿಕಾರಕ್ಕಾಗಿ ಕಿತ್ತಾಡಿಕೊಂಡು ಕೀಳು ಮಟ್ಟದ ರಾಜಕೀಯ ಮಾಡುತ್ತಿರುವ ಮೂರು ಪಕ್ಷಗಳನ್ನು ಜನತೆ ತಿರಸ್ಕರಿಸಬೇಕು’ ಎಂದರು.

‘ಕರ್ನಾಟಕದಲ್ಲಿ ಬಿಎಸ್ಪಿ ಪ್ರಭಾವ ಕಡಿಮೆ ಇದೆ ಎಂದು ಕಾರ್ಯಕರ್ತರು ಎದೆಗುಂದಬೇಕಿಲ್ಲ. ನಮ್ಮದು ಬಿಜೆಪಿ ಮತ್ತು ಕಾಂಗ್ರೆಸ್ ನಂತರದ ದೊಡ್ಡ ರಾಷ್ಟ್ರೀಯ ಪಕ್ಷ. ಎಲ್ಲಾ ರಾಜ್ಯಗಳಲ್ಲಿ ನಮ್ಮದೇ ಆದ ಮತ ಬ್ಯಾಂಕ್ ಮತ್ತು ಕಾರ್ಯಕರ್ತರ ಪಡೆ ಇದೆ. ಚಿಕ್ಕಬಳ್ಳಾಪುರದ ಜನತೆ ನಮಗೆ ಆಶೀರ್ವಾದ ಮಾಡುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ.ಎಲ್‌.ತೋಮರ್‌, ರಾಜ್ಯ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT