ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳ ಮೇಲೆ ಭರವಸೆ ಹಾಗೂ ನಂಬಿಕೆ ಬರಬೇಕು. ಅಂತಹ ಗುಣಮಟ್ಟ ಮತ್ತು ಫಲಿತಾಂಶದ ಶಿಕ್ಷಣ ದೊರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ನಗರದ ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ತವ್ಯದಲ್ಲಿ ಶಿಸ್ತು ಪಾಲನೆ ಮತ್ತು ಪ್ರತಿಭೆಯಿಂದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಹುದ್ದೆ ಅಲಂಕರಿಸಲು ಸಾಧ್ಯವಾಯಿತು. ಅಂತಹವರ ಆದರ್ಶಗಳು ಮತ್ತು ವಿಚಾರಗಳನ್ನು ನಾವು ಅಳವಡಿಸಿಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ, ಮಕ್ಕಳಿಗೆ ಶಿಸ್ತು ಕಲಿಸುವ ವಿಚಾರದಲ್ಲಿ ಪೋಷಕರ ನಂತರದ ಸ್ಥಾನದಲ್ಲಿ ಶಿಕ್ಷಕರೇ ಇರುತ್ತಾರೆ. ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳ ಕಲಿಕಾ ವ್ಯವಸ್ಥೆಯ ಬಗ್ಗೆ ನಂಬಿಕೆ ಮೂಡಬೇಕು. ಆ ನಿಟ್ಟಿನಲ್ಲಿ ಗುಣಮಟ್ಟದ ಕಲಿಕೆ ಅಗತ್ಯ ಎಂದರು.

ಆಗ ಮಾತ್ರ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬಹುದು. ಇಲ್ಲವಾದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವಂತಹ ಸ್ಥಿತಿ ಎದುರಾಗುತ್ತದೆ. ಈ ವಿಚಾರಗಳನ್ನು ಸರ್ಕಾರ ಮನ ಗಂಡು ರಾಜ್ಯದಲ್ಲಿ 700ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆದು ಎಲ್ಕೆಜಿ ಯಿಂದ ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದೆ ಎಂದರು.

ರಾಜ್ಯದ ಎಲ್ಲಾ ಹೋಬಳಿಗಳಲ್ಲಿ ಒಂದು ವಸತಿ ಶಾಲೆ ತೆರೆಯಲಾಗುತ್ತಿದೆ. ಕಾರ್ಮಿಕರ ಮಕ್ಕಳಿಗಾಗಿಯೇ ಪ್ರತ್ಯೇಕವಾದ ವಸತಿ ಶಾಲೆಗಳನ್ನು ತೆರೆಯಲು ಯೋಜಿಸಲಾಗಿದೆ ಎಂದು ತಿಳಿಸಿದರು

ಎಚ್. ನರಸಿಂಹಯ್ಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್ ಶಿವಶಂಕರ್ ರೆಡ್ಡಿ ಮಾತನಾಡಿ, ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ದಾಖಲಾತಿ ಕುಸಿಯುತ್ತಿರುವುದು ತೀವ್ರ ಕಳವಳಕಾರಿ. ಶೈಕ್ಷಣಿಕ ವ್ಯವಸ್ಥೆ ವಿಕಾಸ ಆಗಬೇಕೆ ಹೊರತು ವ್ಯಾಪಾರಿಕರಣ ಆಗಬಾರದು ಎಂದು ಹೇಳಿದರು.

ಸರ್ಕಾರಿ ಶಾಲೆ, ಕಾಲೇಜುಗಳು ರೋಗಗ್ರಸ್ತವಾಗುತ್ತಿವೆ. ಮೊದಲನೇ ಹಂತದ ಕ್ಯಾನ್ಸರ್ ಬಂದಿರುವ ಸ್ಥಿತಿಯಲ್ಲಿವೆ. ಮೊದಲನೇ ಹಂತದ ಕ್ಯಾನ್ಸರ್ ಗೆ ಚಿಕಿತ್ಸೆಯಿಂದ ಸರಿಪಡಿಸಬಹುದು. ಅದೇ ರೀತಿ ಸರ್ಕಾರಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ದುಡಿಯುತ್ತಿರುವವರು ಹಾಗೂ ಸರ್ಕಾರ ಮನಸ್ಸು ಮಾಡಿ ಸುಧಾರಣಾ ಕ್ರಮಗಳನ್ನು ಕೈಗೊಂಡರೆ ಸರ್ಕಾರಿ ಶಾಲಾ ಕಾಲೇಜುಗಳನ್ನು ಉಳಿಸಬಹುದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪಕಾರ್ಯದರ್ಶಿ ಅತಿಕ್ ಪಾಷಾ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ರಮೇಶ್, ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣ ಸ್ವಾಮಿ, ಬಿ.ವಿ ಶ್ರೀನಿವಾಸ್ ಮತ್ತಿತರರು ಪಾಲ್ಗೊಂಡಿದ್ದರು.

‘ಫಲಿತಾಂಶದಲ್ಲಿ ಉತ್ತಮ ಸ್ಥಾನಕ್ಕೆ ಪ್ರಯತ್ನ’

ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಸ್.ಎಸ್. ಎಲ್. ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಕರು ಉಪನ್ಯಾಸಕರು ಬದ್ಧತೆಯಿಂದ ಶ್ರಮಿಸಬೇಕು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ 22ನೇ ಸ್ಥಾನಕ್ಕೆ ಕುಸಿದಿದೆ. ಪಿಯುಸಿ ಫಲಿತಾಂಶ 11ನೇ ಸ್ಥಾನದಲ್ಲಿದೆ ಎಂದು ಡಾ.ಎಂ.ಸಿ.ಸುಧಾಕರ್ ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನೀಡುವ ವ್ಯವಸ್ಥೆಯನ್ನು ಕೊಟ್ಟಿದ್ದೇವೆ. ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಪಾಠ ಮಾಡುವಂತಹ ಸೌಲಭ್ಯ ಮತ್ತು ತಂತ್ರಜ್ಞಾನ ನಮ್ಮಲ್ಲಿದೆ. ಆದರೂ ಕೂಡ ಗುಣಮಟ್ಟದ ಫಲಿತಾಂಶವನ್ನು ಪಡೆಯುವಲ್ಲಿ ವಿಫಲವಾಗಿದ್ದೇವೆ. ಬೋಧನಾ ಕ್ರಮಗಳಲ್ಲಿ ಸುಧಾರಣೆಗಳನ್ನು ತೆಗೆದುಕೊಂಡು ಫಲಿತಾಂಶದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸುವಂತೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.