ಗುಡಿಬಂಡೆ: ತಾಲ್ಲೂಕಿನ ಸೋಮೇನಹಳ್ಳಿ ಹೋಬಳಿಯ ಸೋಮೇಶ್ವರ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವು ಒಂದು ಗಂಟೆ ಕಾಲ ತಡವಾಗಿ ಆರಂಭವಾಯಿತು. ಗ್ರಾಮಸ್ಥರು ಹಾಗೂ ಬೆರಳೆಣಿಕೆಯಷ್ಟು ಇಲಾಖೆಯ ಅಧಿಕಾರಿಗಳ ಹಾಜರಿ ನಡುವೆಯೇ ಸಭೆ ನಡೆಯಿತು.
ತಹಶೀಲ್ದಾರ್ ಸಿಗ್ಬತ್ ಉಲ್ಲಾ ಮಾತನಾಡಿ, ‘ಒಂದು ವಾರದಿಂದ ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಯಲ್ಲಿ ಪ್ರಚಾರ ಮಾಡಲಾಗಿದೆ. ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಸಾರ್ವಜನಿಕರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ’ ಎಂದರು.
ಗ್ರಾಮದ ಮುಖಂಡ ಈಶ್ವರಪ್ಪ ಮಾತನಾಡಿ, ಸೋಮೇನಹಳ್ಳಿ ಪಂಚಾಯಿತಿಯಲ್ಲಿ 23 ಸದಸ್ಯರಿದ್ದಾರೆ. ಇದು ತಾಲ್ಲೂಕಿನ 8 ಪಂಚಾಯಿತಿಗಳ ಪೈಕಿ ದೊಡ್ಡದಾಗಿದೆ. ಸೋಮೇಶ್ವರ ಗ್ರಾಮ ಪಂಚಾಯಿತಿ ಆಗಲು ಅರ್ಹತೆ ಹೊಂದಿದೆ. ಸುಮಾರು 5 ಸಾವಿರಕ್ಕೂ ಹೆಚ್ಚು ಜನಸಖ್ಯೆ ಇದ್ದು, 3 ಸಾವಿರಕ್ಕೂ ಹೆಚ್ಚಿನ ಮತದಾರರಿದ್ದಾರೆ. ಹಾಗಾಗಿ, ಗ್ರಾಮ ಪಂಚಾಯಿತಿಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮರನಾರಾಯಣರೆಡ್ಡಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ರವೀಂದ್ರ, ತೋಟಗಾರಿಕೆ ಎಡಿಎ ದಿವಾಕರ, ರೇಷ್ಮೆ ಅಧಿಕಾರಿ ಮುನಿಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿ ಕನಕರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹ ಮೂರ್ತಿ, ಮೂಳೆ ತಜ್ಞ ಡಾ.ಅಂಜಿನಪ್ಪ, ನೇತ್ರ ತಜ್ಞೆ ಡಾ.ಅನುಷಾ, ಎಇಇ ರಘುನಾಥಮೂರ್ತಿ, ಡಾ.ತೇಜಸ್ವಿ, ಸರಳಾ ಗಂಗಾಧರ, ಸೈದಾಬೀ, ವೆಂಕಟಾಚಲಪತಿ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.