ಬಾಗೇಪಲ್ಲಿ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಸ್ತೆ 44ರ ಟೋಲ್ಫ್ಲಾಜಾದ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಬಸ್ ಸಂಚಾರಕ್ಕೆ ಬುಧವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ ನೀಡಿದರು.

ಬಸ್ ಕಲ್ಪಿಸಿದ ಶಾಸಕ ಸುಬ್ಬಾರೆಡ್ಡಿಗೆ, ಸಾರಿಗೆ ಘಟಕದ ವ್ಯವಸ್ಥಾಪಕರಿಗೆ, ಅಧಿಕಾರಿಗಳನ್ನು ಕಾಲೇಜಿನ ಪ್ರಾಂಶುಪಾಲರು ವೈ.ನಾರಾಯಣ ಗೌರವಿಸಿದರು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಟೋಲ್ ಫ್ಲಾಜಾದ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೋಗಿ ಬರಲು ಬಸ್ ಸಂಚಾರ ಇರಲಿಲ್ಲ. ಆಂಧ್ರಪ್ರದೇಶದ ಕಡೆಗೆ ಸಂಚರಿಸುವ ಬಸ್ ನಿಲುಗಡೆ ಮಾಡುತ್ತಿರಲಿಲ್ಲ. ಪಟ್ಟಣದಿಂದ ಟಿ.ಬಿ. ಕ್ರಾಸ್ ಮೂಲಕ ಹೋಗಿ ಬರಲು ಆಟೊ ಅವಲಂಬಿಸಬೇಕಿತ್ತು. ಬಸ್ ಸೌಲಭ್ಯ ಕಲ್ಪಿಸಿರುವುದು ಸಂತಸ ತಂದಿದೆ ಎಂದು ವಿದ್ಯಾರ್ಥಿಗಳು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಕಾಲೇಜಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರದ ಉಚಿತ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಾರಿಗೆ ಘಟಕದ ವ್ಯವಸ್ಥಾಪಕ ಶ್ರೀನಿವಾಸಮೂರ್ತಿ ಮಾತನಾಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರತಿದಿನ ಬೆಳಿಗ್ಗೆ 9.30ಕ್ಕೆ ಹೋಗಲು ಮತ್ತು ಮಧ್ಯಾಹ್ನ 1.30ಕ್ಕೆ ಕಾಲೇಜಿನಿಂದ ಪಟ್ಟಣಕ್ಕೆ ಬರಲು ಬಸ್ ಸೌಲಭ್ಯ ಕಲ್ಪಿಸಲಾಗಿದೆ. ರಿಯಾಯಿತಿ ಬಸ್ಪಾಸ್ ಮಾಡಿಸದ ವಿದ್ಯಾರ್ಥಿಗಳು ಪಾಸ್ ಮಾಡಿಸಿಕೊಳ್ಳುವಂತೆ ತಿಳಿಸಿದರು.

ಲೆಕ್ಕಾಧಿಕಾರಿ ಮಹಮದ್ ಖಾಲಿದ್, ಗ್ರಂಥಪಾಲಕ ಸಿ.ಎಸ್.ವೆಂಕಟರಾಮರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಸ್.ನರೇಂದ್ರ, ಪುರಸಭಾ ಸದಸ್ಯ ಶ್ರೀನಿವಾಸರೆಡ್ಡಿ, ಕೆ.ಎನ್.ಹರೀಶ್, ಸರ್ದಾರ್ ಅಹಮದ್, ಲಕ್ಷ್ಮಿನರಸಿಂಹಪ್ಪ, ಎಚ್.ಎಸ್.ಪ್ರಕಾಶ್, ನಿಜಾಮುದ್ದೀನ್ (ಬಾಬು), ಮಹಮದ್ ಅಕ್ರಂ, ಮಹಮದ್ ಆರೀಫ್, ನಜೀರಾಬೇಗಂ, ಆದಿಲಕ್ಷ್ಮಿ ಚೆಂಡೂರುವೆಂಕಟೇಶ್, ಬೀಬೀಜಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.