ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ: ಶೇ86.84 ರಷ್ಟು ಮತದಾನ

Last Updated 6 ಡಿಸೆಂಬರ್ 2019, 13:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭೆ ಚುನಾವಣೆಯ ಉಪ ಚುನಾವಣೆಯಲ್ಲಿ ಶೇ 86.84ರಷ್ಟು ಮತದಾನವಾಗಿದೆ.

ಕ್ಷೇತ್ರದಲ್ಲಿ 99,449 ಪುರುಷ, 1,00,749 ಮಹಿಳೆ ಮತ್ತು 22 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,00,220 ಮತದಾರರಿದ್ದಾರೆ. ಈ ಪೈಕಿ 87,732 ಪುರುಷರು, 86,135 ಮಹಿಳೆಯರು, ಮೂರು ತೃತೀಯ ಲಿಂಗಿಗಳು ಸೇರಿದಂತೆ 1,73,870 ಮತದಾರರು ಮತ ಚಲಾಯಿಸಿದ್ದಾರೆ. ಮತದಾರರಲ್ಲಿ ಶೇ88.22 ರಷ್ಟು ಪುರುಷರು, ಶೇ85.49ರಷ್ಟು ಮಹಿಳೆಯರು ಮತ ಚಲಾಯಿಸಿದ್ದಾರೆ.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಶೇ 88.6ರಷ್ಟು ಮತದಾನವಾಗಿತ್ತು. ಕ್ಷೇತ್ರ ವ್ಯಾಪ್ತಿಯಲ್ಲಿದ್ದ 1,95,808 ಮತದಾರರ ಪೈಕಿ 98,056 ಪುರುಷರು, 97,728 ಮಹಿಳೆಯರು ಸೇರಿದಂತೆ 1,72,753 (ಶೇ88.6) ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT