ಸೋಮವಾರ, ಜನವರಿ 25, 2021
16 °C

ಎಪಿಎಂಸಿ ಸ್ಥಾನಕ್ಕೆ ಉಪ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಗೌರಿಬಿದನೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಲ್ಲೂಡಿ ಪರಿಶಿಷ್ಟ ಪಂಗಡ ಮೀಸಲು ಕೃಷಿಕ ಕ್ಷೇತ್ರಕ್ಕೆ ಸದಸ್ಯನನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿ ಅವರು ಸೋಮವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ನವೆಂಬರ್ 30 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿಸೆಂಬರ್ 1 ನಾಮಪತ್ರ ಪರಿಶೀಲನೆ ನಡೆಯಲಿದೆ. ಡಿ. 4 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅವಶ್ಯವಿದ್ದರೆ ಡಿ.14ರಂದು ಬೆಳಿಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅವಶ್ಯಕತೆ ಇದ್ದಲ್ಲಿ ಡಿ.15 ರಂದು ಮರು ಮತದಾನ ನಡೆಯಲಿದೆ. ಡಿ. 16ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಡಿ. 17ರಂದು ಮತದಾನ ಪ್ರಕ್ರಿಯೆ ಕೊನೆಗೊಳ್ಳಲಿದೆ.

ನಾಮಪತ್ರಗಳನ್ನು ಗೌರಿಬಿದನೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ಒಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು