ಭೋಗನಂದೀಶ್ವರ ಪ್ರವೇಶಕ್ಕೆ ನಿರ್ಬಂಧ
ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿಗಿರಿಧಾಮದಲ್ಲಿ ಜೂನ್19 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು, ಶಾಸಕರು ನಂದಿ ಗ್ರಾಮದ ಭೋಗನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಗಣ್ಯರಿಗೆ ಶಿಷ್ಟಾಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೂ.19 ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರಿಗೆ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ದೇವಾಲಯದ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶಿಸಿದ್ದಾರೆ.