ಚಿಂತಾಮಣಿ: ತಾಲ್ಲೂಕಿನ ತಿರುಮಲಾಪುರ ಗ್ರಾಮದದಲ್ಲಿ ಮಾರ್ಚ್ 28ರಂದು ರಾತ್ರಿ ಅತ್ಯಂತ ವೈಭವದಿಂದ ನಡೆಸಲು ಉದ್ದೇಶಿಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ಬೆಳದಿಂಗಳ ಬ್ರಹ್ಮ ರಥೋತ್ಸವವನ್ನು ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ರದ್ದುಪಡಿಸಿ ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿದೆ. ತಿರುಮಲಾಪುರ ಜಾತ್ರೆಯು ಪ್ರತಿವರ್ಷ ವೈಭವದಿಂದ ನಡೆಯುತ್ತಿದ್ದು ಸಾವಿರಾರು ಜನರು ಸೇರುತ್ತಾರೆ. ಈ ಬಾರಿ ಕೇವಲ 500 ಜನರಿಗೆ ಮಾತ್ರ ಅವಕಾಶವಿದೆ. ರಾತ್ರಿವೇಳೆಯಲ್ಲಿ ಜಾತ್ರೆ ನಡೆಯುವುದರಿಂದ ಮಾರ್ಗಸೂಚಿಯಂತೆ ಜನರನ್ನು ನಿಯಂತ್ರಿಸಲು ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.

ದೇವಾಲಯದಲ್ಲಿ ನಡೆಯುತ್ತಿದ್ದ ಎಲ್ಲ ಧಾರ್ಮಿಕ ಕಾರ್ಯಗಳನ್ನು ಸಂಪ್ರದಾಯದಂತೆ ಸಾಂಕೇತಿಕವಾಗಿ ಆಚರಿಸಬೇಕು. ದೇವಾಲಯದ ಒಳಾವರಣ ಹಾಗೂ ಪ್ರಾಕಾರದೊಳಗೆ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ನಡೆಸಬೇಕು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.