ಭಾನುವಾರ, ಆಗಸ್ಟ್ 14, 2022
27 °C

ಅಭ್ಯರ್ಥಿಗಳ ಕೊನೆ ಕ್ಷಣದ ಕಸರತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯು ಡಿ. 15ರಂದು ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ನಡೆಯಲಿದ್ದು, ಕೋವಿಡ್-19 ಮಾನದಂಡಗಳೊಂದಿಗೆ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ.

ತಾಲ್ಲೂಕಿನಲ್ಲಿ 285 ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿವೆ. 543 ಮತದಾರರ ಪೈಕಿ 313 ಪುರುಷರು ಹಾಗೂ 230 ಮಹಿಳಾ ಮತದಾರರು ಇದ್ದಾರೆ. ಎರಡು ಮತದಾನ ಕೇಂದ್ರ ತೆರೆಯಲಾಗಿದೆ. ಚುನಾವಣೆಗೆ 10 ಸಿಬ್ಬಂದಿ ಹಾಗೂ ಮತ ಎಣಿಕೆ ಕಾರ್ಯಕ್ಕೆ 12 ಮಂದಿಯನ್ನು ನೇಮಕ ಮಾಡಲಾಗಿದೆ.

ಚುನಾವಣೆಯಲ್ಲಿ ಸಾಮಾನ್ಯ 8 ಹಾಗೂ 3 ಮಹಿಳಾ ಕ್ಷೇತ್ರಕ್ಕೆ 24 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಕೊರೊನಾ ಸೋಂಕು ಹರಡದಂತೆ ಮತದಾನ ಕೇಂದ್ರ ಹಾಗೂ ಬಿಆರ್‌ಸಿ ಕೇಂದ್ರದಲ್ಲಿ ಸೋಮವಾರ ಸ್ಯಾನಿಟೈಜ್ ಮಾಡಲಾಗಿದೆ. ಮತದಾರರು ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಬೇಕು. ಅಂತರ ಕಾಪಾಡಲು ಮತದಾರರಿಗೆ 6 ಮೀಟರ್‌ ದೂರದಲ್ಲಿ ಸರದಿ ಸಾಲಿನಲ್ಲಿ ನಿಲ್ಲಲು ಪಟ್ಟಿ ಹಾಕಲಾಗಿದೆ.

ಮತದಾನಕ್ಕೆ ಬರುವ ಶಿಕ್ಷಕರು ಕಡ್ಡಾಯವಾಗಿ ಗುರುತಿನ ಚೀಟಿ ಅಥವಾ ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್‌, ಆಧಾರ್ ಕಾರ್ಡ್‌ ತರಬೇಕಾಗಿದೆ ಎಂದು ಚುನಾವಣಾಧಿಕಾರಿ ಸಿದ್ದಪ್ಪ
ತಿಳಿಸಿದ್ದಾರೆ.

ಚುನಾವಣಾ ಕೇಂದ್ರದ 100 ಮೀಟರ್‌ ಅಂತರದಲ್ಲಿ ಯಾವುದೇ ಪ್ರಚಾರ ಮಾಡುವಂತಿಲ್ಲ. ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕ್ಯಾನಿಂಗ್, ಕೈಗಳಿಗೆ ಸ್ಯಾನಿಟೈಜ್ ಮಾಡಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ ಎಂದು ತಿಳಿಸಿದರು. ‌

ಅಭ್ಯರ್ಥಿಗಳು ಕಳೆದ ವಾರದಿಂದ ತಾಲ್ಲೂಕಿನ ಶಾಲೆಗಳಿಗೆ ಹಾಗೂ ಮತದಾರರ ಮನೆ ಬಾಗಿಲುಗಳಿಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಸಾಮಾಜಿಕ ತಾಣಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್‌ಗಳಲ್ಲಿ ಕರಪತ್ರಗಳ ಮೂಲಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.