ಶುಕ್ರವಾರ, ಆಗಸ್ಟ್ 12, 2022
27 °C

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ 32 ಕೆ.ಜಿ ಗಾಂಜಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ರಾಮಕುಂಟೆ ರಸ್ತೆ ಪಕ್ಕ ಸೋಮವಾರ ಸಂಜೆ ನಿಂತಿದ್ದ ಆಂಧ್ರಪ್ರದೇಶ ಮೂಲದ ಕಾರೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು ₹10 ಲಕ್ಷ ಮೌಲ್ಯದ 32 ಕೆ.ಜಿ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ‘ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಉಳ್ಳ ಇಂಡಿಗೊ ಕಾರಿನ ಹಿಂಬದಿ ಸೀಟಿನಲ್ಲಿ ಮೂರು ಬ್ಯಾಗ್ ಗಳಲ್ಲಿ 32 ಕೆ.ಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಆಂಧ್ರದ ಚಿತ್ತೂರು ಜಿಲ್ಲೆಯ ಗುಂಟಪಲ್ಲಿ ಗ್ರಾಮದ ನಿವಾಸಿ ಶಂಕರ್ (33) ಮತ್ತು ಶಿಡ್ಲಘಟ್ಟದ ಶಬಾಜ್ (26) ಬಂಧಿತ ಆರೋಪಿಗಳು. ಈ ಪೈಕಿ ಶಂಕರ್ ಗಾಂಜಾ ಸಾಗಣೆಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದು, ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು