ಶನಿವಾರ, ಜನವರಿ 28, 2023
19 °C
ಮುರುಗಮಲ್ಲ ಗ್ರಾಮದ ದರ್ಗಾದಲ್ಲಿ ನಡೆದ ಶಾಂತಿಸಭೆಯಲ್ಲಿ ನಿರ್ಧಾರ

ಸಾಮರಸ್ಯದಿಂದ ಉರುಸ್‌ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಮುರುಗಮಲ್ಲದ ಅಮ್ಮಾಜಾನ್ ಬಾವಾಜಾನ್ ದರ್ಗಾದಲ್ಲಿ ಅಕ್ಟೋಬರ್ 9 ಮತ್ತು 10ರಂದು ನಡೆಯುವ ಉರುಸ್‌ನಲ್ಲಿ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮದ ಆಚರಣಾ ಸಮಿತಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಎಲ್ಲ ವರ್ಗದ ಜನರು ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ ತಿಳಿಸಿದರು.

ತಾಲ್ಲೂಕಿನ ಮುರುಗಮಲ್ಲ ಗ್ರಾಮದ ದರ್ಗಾ ಆವರಣದಲ್ಲಿ ಗುರುವಾರ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.

ಶಾಂತಿಯುತವಾಗಿ ಉರುಸ್ ನಡೆಸಲು ಸ್ಥಳೀಯರು ಸಂಪೂರ್ಣ ಸಹಕಾರ ನೀಡಬೇಕು. ಮುರುಗಮಲ್ಲ ಹಿಂದು-ಮುಸ್ಲಿಂ ಭಾವೈಕ್ಯತೆಯ ಕೇಂದ್ರ ಎಂದು ದೇಶದಾದ್ಯಂತ ಪ್ರಸಿದ್ಧಿಯಾಗಿದೆ. ಈ ಹೆಸರನ್ನು ಉಳಿಸಲು ಜನರು ಸಹಕಾರ ನೀಡಬೇಕು. ಎರಡು ಸಮುದಾಯಗಳು ಒಟ್ಟಾಗಿ ಉರುಸ್ ಆಚರಿಸಬೇಕು. ಯುವಕರಿಂದ ಸಣ್ಣ-ಪುಟ್ಟ ತಪ್ಪು ಘಟನೆಗಳು ನಡೆದರೆ, ಹಿರಿಯಲು ತಕ್ಷಣ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಕಿವಿಮಾತು ಹೇಳಿದರು.

ಎಎಸ್ಪಿ ಕುಶಾಲ್ ಚೌಕ್ಸೆ ಮಾತನಾಡಿ, ಅಧಿಕ ಜನರು ಭಾಗವಹಿಸುವ ಉರುಸ್ ಕಾರ್ಯಕ್ರಮದ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿರುತ್ತದೆ. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಯುವಕರು ರಸ್ತೆಗಳಲ್ಲಿ ವೀಲಿಂಗ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯುವಕರು ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು. 

ವಕ್ಫ್ ಬೋರ್ಡ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಮುಜಮಿಲ್ ಪಾಷಾ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯ ಅನ್ಸರ್ ಖಾನ್, ದರ್ಗಾ ಮೇಲ್ವಿಚಾರಕ ತಯ್ಯೂಬ್ ನವಾಜ್, ಆರಿಫ್ ಖಾನ್, ಉರುಸ್ ಆಚರಣಾ ಸಮಿತಿ ಪದಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.