ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸಕ್ಕೆ ಹಾಜರಾಗಲು ಸಿಇಒ ಸೂಚನೆ

ಹೊರಗುತ್ತಿಗೆ ಸಿಬ್ಬಂದಿ ಮುಷ್ಕರ
Last Updated 3 ಅಕ್ಟೋಬರ್ 2020, 15:47 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಅ.5ರಂದು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಪಿ.ಶಿವಶಂಕರ್ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಕಚೇರಿ ನೌಕರರು ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಅಸಹಕಾರ ಮತ್ತು ವರದಿಗಳನ್ನು ಸಲ್ಲಿಸದೇ ಇರುವುದು ಕಂಡು ಬಂದಿದೆ. ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋವಿಡ್-19ರ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಅಸಹಕಾರ ತೋರಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅ.5ರಂದು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಮಾರ್ಗಸೂಚಿಯನ್ವಯ ವಜಾಗೊಳಿಸುವಂತೆ ಕ್ರಮ ವಹಿಸಲಾಗುವುದು ಎಂದು ಸಿಇಒ ಪಿ.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT