ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯ 12 ಕೇಂದ್ರದಲ್ಲಿ ಸಿಇಟಿ: ಜಿಲ್ಲಾಧಿಕಾರಿ ಆರ್. ಲತಾ

ಇದೇ 28, 29ರಂದು ಪರೀಕ್ಷೆ: ಜಿಲ್ಲಾಡಳಿತದಿಂದ ಸಿದ್ಧತೆ ಪೂರ್ಣ
Last Updated 27 ಆಗಸ್ಟ್ 2021, 3:10 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಆ. 28 ಮತ್ತು 29ರಂದು ನಡೆಯಲಿರುವ ಸಿಇ‌ಟಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಲತಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನಗರದ ಸಂತ ಜೋಸೆಫರ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ 288 ವಿದ್ಯಾರ್ಥಿಗಳು, ನ್ಯೂಟನ್ ಇಂಟಿಗ್ರೇಟೆಡ್ ಪದವಿಪೂರ್ವ ಕಾಲೇಜಿನಲ್ಲಿ 384, ಬಿಬಿ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 360, ಅಗಲಗುರ್ಕಿ ಎಸ್.ಬಿ.ಜಿ.ಎನ್.ಎಸ್. ಪದವಿಪೂರ್ವ ಕಾಲೇಜಿನಲ್ಲಿ 360, ಅಗಲಗುರ್ಕಿ ಬಿ.ಜಿ.ಎಸ್. ಸೈನ್ಸ್ ಅಕಾಡೆಮಿ ಪದವಿ ಕಾಲೇಜಿನಲ್ಲಿ 240 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಬಾಗೇಪಲ್ಲಿಯ ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ 576, ಚಿಂತಾಮಣಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 432, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 312, ರಾಯಲ್ ಪದವಿಪೂರ್ವ ಕಾಲೇಜಿನಲ್ಲಿ 576, ಗೌರಿಬಿದನೂರಿನ ಸರ್ಕಾರಿ ಎಸ್.ಎಸ್.ಇ.ಎ ಪದವಿಪೂರ್ವ ಕಾಲೇಜಿನಲ್ಲಿ 576, ಶಿಡ್ಲಘಟ್ಟ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 312, ಬಿ.ಜಿ.ಎಸ್. ಪದವಿಪೂರ್ವ ಕಾಲೇಜಿನಲ್ಲಿ 192 ವಿದ್ಯಾರ್ಥಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 4,608 ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

ಅಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ಸಾರ್ವಜನಿಕ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಕೋವಿಡ್ ಕೇರ್ ಪರೀಕ್ಷಾ ಕೇಂದ್ರ ಒಳಗೊಂಡಂತೆ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕಂದವಾರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರವನ್ನು ಕೋವಿಡ್ ಸೋಂಕಿತ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಲಾಗಿದೆ ಎಂದುತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ 2 ಗಂಟೆ ಮುಂಚಿತವಾಗಿ ಹಾಜರಿರುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಆವರಣದೊಳಗೆ ಪೋಷಕರ ಪ್ರವೇಶ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಮನೆಯಿಂದ ಕುಡಿಯುವ ನೀರಿನ ಬಾಟಲ್‌ ತರಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT