ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.25 ರಂದು ಚಲವಾದಿ ಮುಖಂಡರ ಸಭೆ

Last Updated 21 ಆಗಸ್ಟ್ 2019, 10:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲಾ ಚಲವಾದಿ ಮಹಾಸಭಾ ಸಮುದಾಯವನ್ನು ಸಂಘಟನೆ ಮಾಡುವ ಆ. 25 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಸಮುದಾಯದ ಮುಖಂಡರ ಸಭೆ ಕರೆಯಲಾಗಿದೆ’ ಎಂದು ಚಲವಾದಿ ಮಹಾಸಭಾ ಸಂಘದ ಹಿರಿಯ ಮುಖಂಡ ಎ.ಡಿ.ಆವುಲಪ್ಪ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಲವಾದಿ ಮಹಾಸಭಾ ರಾಜ್ಯದಾದ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಆದರೆ ಇತ್ತೀಚೆಗೆ ನಮ್ಮ ಸಮುದಾಯವನ್ನು ರಾಜಕೀಯವಾಗಿ ಕಡೆಗಣಿಸುತ್ತಿರುವುದು ಬೇಸರದ ಸಂಗತಿ. ಆದ್ದರಿಂದ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘಟನೆಯನ್ನು ಗಟ್ಟಿ ಮಾಡಲು ನಿರ್ಧಾರ ಮಾಡಲಾಗಿದೆ’ ಎಂದು ಹೇಳಿದರು.

ಚಲವಾದಿ ಮಹಾಸಭಾ ಹಿರಿಯ ಮುಖಂಡ ಬಿ.ಎಚ್.ನರಸಿಂಹಪ್ಪ ಮಾತನಾಡಿ, ‘ಆ.25ರಂದು ನಡೆಯುವ ಸಭೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ, ಪಂಚಾಯಿತಿ ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಮುಂದಿನ ದಿನಗಳಲ್ಲಿ ಸಮುದಾಯವನ್ನು ಬೆಳೆಸಲು ಅರಿವು ಮೂಡಿಸಲಾಗುತ್ತದೆ’ ಎಂದರು.

‘ಇತ್ತೀಚೆಗೆ ನಡೆದ ಸಚಿವ ಸಂಪುಟ ದರ್ಜೆಯಲ್ಲಿ ಮುಳಬಾಗಿಲು ಶಾಸಕ ನಾಗೇಶ್ ಅವರಿಗೆ ಅವಕಾಶ ಮಾಡಿಕೊಟ್ಟಿರುವುದು ಸ್ವಾಗತಾರ್ಹ. ಆದರೆ ಇದು ಸಾಲದು. ಮುಂದಿನ ದಿನಗಳಲ್ಲಿ ನಮ್ಮ ಜನಸಂಖ್ಯೆ ಆಧಾರದ ಮೇಲೆ ಇನ್ನು ಹಲವರಿಗೆ ಸಚಿವ ಸ್ಥಾನ ನೀಡಬೇಕು. ರಾಜ್ಯದ ಹಾಗೂ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕು’ ಎಂದು ಒತ್ತಾಯಿಸಿದರು.

ಚಲವಾದಿ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಮುಖಂಡರಾದ ತ್ಯಾಗರಾಜು, ಕಳವಾರ ಶ್ರೀಧರ್, ನಾರಾಯಣಪ್ಪ, ರಾಮು, ಮುನಿರಾಜು, ದೇವರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT