ಶಿಡ್ಲಘಟ್ಟ: ಪುರಾತನವಾದ, ಚಾರಿತ್ರಿಕ ಹಿನ್ನೆಲೆಯುಳ್ಳ ವೀರಗಲ್ಲುಗಳನ್ನು ಕೆಲವೆಡೆ ಮಾತ್ರ ವೀರರಗುಡಿ ಎಂದು ಕರೆದು ಪೂಜಿಸಿದರೆ, ಬಹುತೇಕ ಕಡೆಗಳಲ್ಲಿ ಇವುಗಳನ್ನು ನಿರ್ಲಕ್ಷಿಸಿರುವುದು ಕಂಡುಬರುತ್ತದೆ. ಆದರೆ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಸುತ್ತಮುತ್ತ ಸಿಕ್ಕ ಎಲ್ಲ ವೀರಗಲ್ಲುಗಳನ್ನು ಅಂದವಾಗಿ ದೇವಸ್ಥಾನದ ಕಾಂಪೌಂಡ್ಗೆ ಅಳವಡಿಸಿ ಸಂರಕ್ಷಿಸಿದ್ದಾರೆ.

ಚೀಮಂಗಲ ಗ್ರಾಮದ ಚೌಡೇಶ್ವರಮ್ಮ ದೇವಾಲಯದ ಕಾಂಪೌಂಡ್ ಬಳಿ ಎಂಟು ವೀರಗಲ್ಲುಗಳನ್ನು ಸಂರಕ್ಷಿಸಲಾಗಿದೆ. ಕುದುರೆಯ ಮೇಲೆ ಕತ್ತಿ ಹಿಡಿದಿರುವ ವೀರನಿಗೆ ಚಾಮರ ಹಿಡಿದಿರುವ ಸೇವಕ, ಕಳಶ ಹೊತ್ತ ಮಹಿಳೆಯರು, ಕತ್ತಿ ಗುರಾಣಿ ಹಿಡಿದ ವೀರ, ಬಿಲ್ಲುಬಾಣ ಹಿಡಿದ ವೀರ, ಹಸುಗಳನ್ನು ಸಂರಕ್ಷಿಸಲು ಪ್ರಾಣತೆತ್ತ ವೀರ... ಹೀಗೆ ನಾನಾ ಚಿತ್ರಗಳನ್ನು ಕಲ್ಲಿನಲ್ಲಿ ಕೆತ್ತಲಾಗಿದೆ.

‘ಗ್ರಾಮದಲ್ಲಿ ಮೊದಲು ವೀರಗುಡಿ ಎಂಬುದಿತ್ತು ಅಲ್ಲಿ ಕೆಲವು ಕಲ್ಲುಗಳಿದ್ದವು. ಅದೆಲ್ಲ ಕುಸಿದು ಹಾಳಾಗಿತ್ತು. ಚೌಡೇಶ್ವರಮ್ಮ ದೇವಾಲಯವನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಅವನ್ನು ಮತ್ತು ಗ್ರಾಮದ ಸುತ್ತಮುತ್ತ ಅಲ್ಲಲ್ಲಿ ಬಿದ್ದಿದ್ದ ಕಲ್ಲುಗಳನ್ನು ತಂದು ಕಾಂಪೌಂಡ್ಗೆ ಅಳವಡಿಸಿದೆವು. ನಮ್ಮ ಗ್ರಾಮಕ್ಕೆ ಸಂಬಂಧಿಸಿದ ವೀರರ ನೆನಪಿಗಾಗಿ ನಿರ್ಮಿಸಿರುವ ಸ್ಮಾರಕಗಳಿವು ಎಂದು ಹಿರಿಯರು ಹೇಳುತ್ತಾರೆ. ಅಂಥ ವೀರರ ಚಿತ್ರಗಳನ್ನು ಜೋಪಾನವಾಗಿರಿಸುವುದು ನಮ್ಮ ಕರ್ತವ್ಯ’ ಎಂದು ಗ್ರಾಮದ ಮುನಿರಾಜು ಮತ್ತು ಬಾಬು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.