ಚೇಳೂರು: ಪಟ್ಟಣದ ಸಮೀಪದ ಹೊಲವೊಂದರಲ್ಲಿ ನಾಯಿಗಳ ಹಿಂಡಿನಿಂದ ದಾಳಿಗೊಳಗಾಗುತ್ತಿದ್ದ ಜಿಂಕೆ ಮರಿಯೊಂದನ್ನು ರೈತರು ಸಮಯ ಪ್ರಜ್ಞೆಯಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ರೈತ ವೆಂಕಟರವಣಪ್ಪ (ಯರ್ರಪ್ಪ) ಅವರು ಎಂದಿನಂತೆ ಹೊಲದಲ್ಲಿದ್ದಾಗ ನಾಯಿಗಳು ಜಿಂಕೆ ಮರಿಯನ್ನು ಅಟ್ಟಾಡಿಸಿಕೊಂಡು ಬರುತ್ತಿರುವುದನ್ನು ಗಮನಿಸಿದರು. ತಕ್ಷಣ ಕಾರ್ಯಪ್ರವೃತ್ತರಾಗಿ ನಾಯಿಗಳನ್ನು ಓಡಿಸಿ ಜಿಂಕೆ ಮರಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದರು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ರೈತರು ಸೇರಿ ಜಿಂಕೆ ಮರಿಯನ್ನು ಪಟ್ಟಣದ ಪಶು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿಸಿದರು. ಸದ್ಯ ಜಿಂಕೆ ಮರಿ ಆರೋಗ್ಯವಾಗಿದೆ. ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಚೇಳೂರು ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟರವಣಪ್ಪ, ಗಸ್ತು ಅರಣ್ಯ ಪಾಲಕ ಪಿ.ನರಸಿಂಹಪ್ಪ, ರವಣಪ್ಪ, ವೆಂಕಟಸ್ವಾಮಿ, ನಾಗೇಶ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-16-2055063783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.