ಚೇಳೂರು: ಪೋಕ್ಸೊ ಕಾಯ್ದೆ, ಬಾಲ್ಯವಿವಾಹ ನಿಷೇಧ, ಸೈಬರ್ ಅಪರಾಧ ತಡೆ ಹಾಗೂ ಸಂಚಾರ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಚೇಳೂರು ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಕಾಲೊನಿ, ಶೇರ್ಖಾನ್ಕೋಟೆ ಮತ್ತು ಗೇರಿಗೆರೆಡ್ಡಿಪಾಳ್ಯ ಗ್ರಾಮಗಳಲ್ಲಿ ಗುರುವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಚೇಳೂರು ಪೊಲೀಸ್ ಠಾಣೆ ಪಿಎಸ್ಐ ಗಣೇಶ್ ಕೆ., ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಪ್ರಕರಣಗಳ ತಡೆಗೆ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಹೇಳಿದರು.

ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳಿಗೆ ಮದುವೆ ಮಾಡುವುದು ಕಾನೂನುಬಾಹಿರ. ಬಾಲ್ಯವಿವಾಹಕ್ಕೆ ಸಹಕರಿಸುವವರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಿಚಿತ ಕರೆ, ಸಂದೇಶ ಹಾಗೂ ಆನ್ಲೈನ್ ಲಿಂಕ್ಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು.

ಯಾವುದೇ ಕಾರಣಕ್ಕೂ ಒಟಿಪಿ, ಬ್ಯಾಂಕ್ ಖಾತೆ ಅಥವಾ ವೈಯಕ್ತಿಕ ಮಾಹಿತಿಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು ಎಂದು ಹೇಳಿದರು.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಸಂಚಾರ ನಿಯಮಗಳನ್ನು ಪಾಲಿಸಬೇಕು. ಈ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದರು. ಕಾನೂನಿನ ಅರಿವು ಹೆಚ್ಚಿದರೆ ಅಪರಾಧ ಪ್ರಕರಣಗಳ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಿದರು.

ಪ್ರೊಬೇಷನರಿ ಪಿಎಸ್ಐ ನಿಹಾಲ್, ಪೊಲೀಸ್ ಸಿಬ್ಬಂದಿ ಭೀರಣ್ಣ, ಪ್ರಶಾಂತ್ ಸೇರಿದಂತೆ ಇತರ ಸಿಬ್ಬಂದಿ, ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-16-1174769918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.