ಚೇಳೂರು: ಇಲ್ಲಿನ ಬ್ರಾಹ್ಮಣರ ಭವನದಲ್ಲಿ ವಿಪ್ರ ವನಿತಾ ವೇದಿಕೆ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.

ಸಮಾಜದ ಮಹಿಳೆಯರಲ್ಲಿನ ಕಲೆ, ಸಾಹಿತ್ಯ ಮತ್ತು ವಿವಿಧ ಸೃಜನಶೀಲ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಂಘಟನೆ ಆರಂಭಿಸಲಾಗಿದೆ ಎಂದು ಸುವರ್ಣಾ ಅಮರನಾಥ ಹೇಳಿದರು.

ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರಲ್ಲಿ ಅಪಾರ ಜ್ಞಾನ ಮತ್ತು ಕೌಶಲ್ಯ ಅಡಗಿದೆ. ಆದರೆ ದೈನಂದಿನ ಕೌಟುಂಬಿಕ ಜವಾಬ್ದಾರಿಗಳ ಮಧ್ಯೆ ತಮ್ಮ ಆಸಕ್ತಿಗಳನ್ನು ಪ್ರದರ್ಶಿಸಲು ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ವಿಪ್ರ ವನಿತಾ ವೇದಿಕೆ ಪ್ರಮುಖ ಪಾತ್ರ ವಹಿಸಲಿದೆ ಎಂದರು.

ಚೇಳೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷೆಯಾಗಿ ಮಾನಸಾ ಆಯ್ಕೆಯಾದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸಂಘದ ಬಲವರ್ಧನೆಗೆ ಶ್ರಮಿಸುವುದಾಗಿ ಹೇಳಿದರು.

ಸಭೆ ಉದ್ದೇಶಿಸಿ ಮಾತನಾಡಿದ ಪೂರ್ಣಿಮಾ, ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಸಂಘಟನೆ ಅತ್ಯಗತ್ಯವಾಗಿದೆ ಎಂದರು.

ವೈದೇಹಿ ಶ್ರೀಕಾಂತ್, ವತ್ಸಲಾ ನಗೇಶ್, ಮಂಜುಳಾ, ಚಂಪಕ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಅಪಾರ ಸಂಖ್ಯೆಯ ವಿಪ್ರ ಮಹಿಳೆಯರು, ಹಿರಿಯರು ಮತ್ತು ಸಮಾಜದ ಮುಖಂಡರು ಭಾಗವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-158747976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.