ಚೇಳೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಚೇಳೂರು ತಾಲ್ಲೂಕಿನಲ್ಲಿ ಶೀಘ್ರದಲ್ಲೇ ನ್ಯಾಯಾಲಯದ ಕಲಾಪಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಶುಕ್ರವಾರ ನ್ಯಾಯಾಧೀಶರು ಪಟ್ಟಣದ ವಿವಿಧ ಬಾಡಿಗೆ ಕಟ್ಟಡಗಳನ್ನು ಪರಿಶೀಲಿಸಿದರು.

ಬಾಗೇಪಲ್ಲಿ ತಾಲ್ಲೂಕು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥಾಚಾರಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಭಾರತಿ ಅವರು ಜಂಟಿಯಾಗಿ ಚೆಳೂರು ಪಟ್ಟಣದ ವಿವಿಧೆಡೆ ಭೇಟಿ ನೀಡಿ, ನ್ಯಾಯಾಲಯದ ಕಾರ್ಯನಿರ್ವಹಣೆಗೆ ಪೂರಕವಾದ ಸ್ಥಳಗಳ ಬಗ್ಗೆ ಮಾಹಿತಿ ಪಡೆದರು.

ಈ ವೇಳೆ ಮಾತನಾಡಿದ ನ್ಯಾಯಾಧೀಶರು, ತಾಲ್ಲೂಕಿನ 12 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಸಾರಿಗೆ ಸಂಪರ್ಕ ಲಭ್ಯವಿರುವ ಸ್ಥಳದಲ್ಲಿ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯ ಆರಂಭಿಸಲು ಪರಿಶೀಲನೆ ನಡೆಸಲಾಗುತ್ತಿದೆ. ಬಾಗೇಪಲ್ಲಿ ರಸ್ತೆಯಲ್ಲಿರುವ ಒಂದು ಸುಸಜ್ಜಿತ ಕಟ್ಟಡ ಸೇರಿದಂತೆ ಇತರ ಸ್ಥಳಗಳನ್ನು ವೀಕ್ಷಿಸಲಾಗಿದೆ. ರಾಜ್ಯ ಹೈಕೋರ್ಟ್ನ ನಿರ್ದೇಶನದಂತೆ ಈ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಹಲವು ಪ್ರಕರಣಗಳ ವಿಲೇವಾರಿಗೆ ಸಹಕಾರಿ: ಚೇಳೂರು ತಾಲ್ಲೂಕು ವ್ಯಾಪ್ತಿಯ 12 ಗ್ರಾ.ಪಂಗಳು ಈ ಹಿಂದೆ ಚಿಂತಾಮಣಿ ಹಾಗೂ ಬಾಗೇಪಲ್ಲಿ ವ್ಯಾಪ್ತಿಗೆ ಬರುತ್ತಿದ್ದವು. ಇಲ್ಲಿನ ಜಮೀನು ವಿವಾದ, ಚೆಕ್ ಬೌನ್ಸ್, ಕೌಟುಂಬಿಕ ಕಲಹ ಸೇರಿದಂತೆ ನೂರಾರು ಪ್ರಕರಣಗಳು ಬಾಕಿ ಉಳಿದಿವೆ.

ಇಲ್ಲಿಯೇ ನ್ಯಾಯಾಲಯ ಸ್ಥಾಪನೆಯಾಗುವುದರಿಂದ ಸ್ಥಳೀಯರಿಗೆ ಹಣ ಮತ್ತು ಸಮಯದ ಉಳಿತಾಯವಾಗಲಿದೆ. ಕಟ್ಟಡದ ಲಭ್ಯತೆ, ವಸತಿ ಸೌಕರ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಜಿಲ್ಲಾ ನ್ಯಾಯಾಧೀಶರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಚೇಳೂರು ವಕೀಲರ ಸಂಘದ ಜಿ.ಎನ್.ಮಂಜುನಾಥ್, ಮಾಜಿ ಅಧ್ಯಕ್ಷ ಎ.ಜೆ.ಸುಧಾಕರ್, ನಂಜುಂಡಪ್ಪ, ಆರ್.ಐ.ಈಶ್ವರ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-16-1279700459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.